ಬೆಂಗಳೂರು: ಸಾಗುವಳಿ ಭೂ ಮಂಜೂರಾತಿಗಾಗಿ ಬಗರ್ ಹುಕುಂ (ಅಕ್ರಮ ಸಕ್ರಮ) ಯೋಜನೆಯ ಅಡಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನದಲ್ಲಿ ಭರವಸೆ ನೀಡಿದರು. ಅಲ್ಲದೇ ಬಗರ್ ಹುಕುಂ ಅಡಿ ಒಬ್ಬರಿಂದಲೇ 25 ಅರ್ಜಿ ಸಲ್ಲಿಸಿರೋ ಶಾಕಿಂಗ್ ಮಾಹಿತಿಯನ್ನು ಸದನದ ಮುಂದೆ ಬಿಚ್ಚಿಟ್ಟರು.
ಸೋಮವಾರ ಪ್ರಶ್ನೋತ್ತರ ಅವಧಿಯ ವೇಳೆ ಬೈಂದೂರು ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ಬಗರ್ ಹುಕುಂ ಯೋಜನೆ ಅಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಅನರ್ಹಗೊಂಡ ಅರ್ಜಿಗಳ ಸಂಖ್ಯೆ ಎಷ್ಟು? ಮತ್ತು ಅನರ್ಹಗೊಳಿಸಲು ಕಾರಣವೇನು? ಎಂದು ಪ್ರಶ್ನಿಸಿದ್ದರು.
ಬಗರ್ ಹುಕುಂ ದುರುಯೋಗ: ಸಚಿವರು ವಿಷಾದ
ಬಡವರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಜಾರಿಗೆ ತಂದಿರುವ ಬಗರ್ ಹುಕುಂ ಯೋಜನೆಯನ್ನು ಅನೇಕರು ಉದ್ದೇಶಪೂರ್ವಕವಾಗಿ ದುರುಪಯೋಗಗೊಳಿಸುತ್ತಿದ್ದಾರೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ವಿಷಾದ ವ್ಯಕ್ತಪಡಿಸಿದರು.
ಕೆಲವರು ಬಗರ್ ಹುಕುಂ ಜಮೀನು ಮಂಜೂರಾತಿಗೆ 25ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ ಅರ್ಜಿದಾರರಿಗೆ 2005ಕ್ಕೆ ಕನಿಷ್ಠ 18 ವರ್ಷವಾಗಿರಬೇಕು. ಆದರೆ, ಈಗ 18 ವರ್ಷವಾದವರೂ ಅರ್ಜಿ ಸಲ್ಲಿಸಿದ್ದಾರೆ. ನಮೂನೆ 57ರ ಅಡಿಯಲ್ಲಿ ಒಟ್ಟಾರೆ 9,85,000 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲರಿಗೂ ಜಮೀನು ಮಂಜೂರು ಮಾಡಬೇಕೆಂದರೆ 54 ಲಕ್ಷ ಎಕರೆ ಜಮೀನಿನ ಅಗತ್ಯವಿದೆ. ಆದರೆ, ರಾಜ್ಯದಲ್ಲಿ ಸರ್ಕಾರಿ ಜಮೀನೆ ಅಷ್ಟಿಲ್ಲ.
ಅನರ್ಹರಿಗೆ ಭೂ ಮಂಜೂರುಗೊಳಿಸಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಾಗಿ ಅನೇಕರ ಅರ್ಜಿಗಳು ಅನರ್ಹಗೊಂಡಿವೆ. ಆದರೆ, ಅರ್ಜಿಗಳನ್ನು ತಿರಸ್ಕೃತಗೊಳಿಸುವ ಸಂದರ್ಭದಲ್ಲಿ ನಿಯಮಗಳನ್ನು ತಪ್ಪಾಗಿ ಅರ್ಥೈಸಿದ್ದರೆ ಖಂಡಿತವಾಗಿ ಪುನರ್ ಪರಿಶೀಲನೆಗೆ ಒಳಪಡಿಸಲಾಗುವುದು ಎಂದರು.
`ಬಗರ್ ಹುಕುಂ ಸಾಗುವಳಿ’ದಾರರಿಗೆ ಭರ್ಜರಿ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಅನರ್ಹಗೊಂಡ ಅರ್ಜಿ’ ಪುನರ್ ಪರಿಶೀಲನೆ
ಟಾಟಾ ಸಮೂಹದ ಮಾರುಕಟ್ಟೆ ಮೌಲ್ಯವು ಈಗ ಪಾಕಿಸ್ತಾನದ ‘ಸಂಪೂರ್ಣ ಆರ್ಥಿಕತೆಗಿಂತ’ ಹೆಚ್ಚು