ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಕಾವೇರಿ ನದಿ ( Cauvery River ) ಉಕ್ಕಿ ಹರಿಯುತ್ತಿದೆ. ಈ ಪರಿಣಾಮ ಕೆ ಆರ್ ಎಸ್ ಜಲಾಶಯಕ್ಕೆ ( KRS Dam ) ಒಳಹರಿವಿನ ಪ್ರಮಾಣ ಕೂಡ ಹೆಚ್ಚಾಗಿದೆ. ಇದರಿಂದಾಗಿ ಕಾವೇರಿ ನದಿಗೆ 25 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.

ಕೃಷ್ಣ ರಾಜ ಸಾಗರ ಅಣೆಕಟ್ಟಿನ ಗರಿಷ್ಠ ಮಟ್ಟ 124.80 ಅಡಿಯಾಗಿದೆ. ಇದೀಗ ಕೆ ಆರ್ ಎಸ್ ಜಲನಯನ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಒಳಹರಿವಿನ ಪ್ರಮಾಣ ಕೂಡ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಹೆಚ್ಚುವರಿ 25 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗಿದೆ.

WATH VIDEO: ಬಾಯಿಯಿಂದ ನೀರು ಉಗುಳಿ ಬಟ್ಟೆ ಇಸ್ತ್ರಿ ಮಾಡುತ್ತಿದ್ದ – ವೃದ್ಧನ ವೀಡಿಯೋ ವೈರಲ್

ಕಾವೇರಿ ನದಿಗೆ ಕೆಆರ್ ಎಸ್ ಡ್ಯಾಂ ನಿಂದ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ ಕಾರಣ, ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಜೊತೆಗೆ ಜಿಲ್ಲೆಯ ರೈತರ ಮೊದಗಲ್ಲಿ ಮಂದಹಾಸ ಮೂಡಿಸಿದೆ.

ಕೆ ಆರ್ ಎಸ್ ಡ್ಯಾಂಗೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ನಿನ್ನೆ ಮಧ್ಯಾಹ್ನದಿಂದಲೇ 10 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಡ್ಯಾಂ ಭರ್ತಿಗೆ ಒಂದು ಅಡಿ ಮಾತ್ರವೇ ಬಾಕಿ ಇದೆ. ಈ ಹಿನ್ನಲೆಯಲ್ಲಿ ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

Share.
Exit mobile version