ನವದೆಹಲಿ: 26/11 ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕ್ಕಂ ಅವರನ್ನು ಮುಂಬೈ ಉತ್ತರ ಕೇಂದ್ರದಿಂದ ಬಿಜೆಪಿ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಬಿಜೆಪಿಯ ಪೂನಂ ಮಹಾಜನ್ ಈ ಕ್ಷೇತ್ರದ ಹಾಲಿ ಸಂಸದೆಯಾಗಿದ್ದಾರೆ.
ಕುತೂಹಲಕಾರಿ ಸಂಗತಿಯೆಂದರೆ, ನಿಕಮ್ ಅವರನ್ನು ನಾಮನಿರ್ದೇಶನ ಮಾಡುವ ನಿರ್ಧಾರ ತೆಗೆದುಕೊಂಡ ಸಭೆಯಲ್ಲಿ ಪೂನಂ ಮಹಾಜನ್ ಹಾಜರಿರಲಿಲ್ಲ ಎನ್ನಲಾಗಿದೆ. 1993 ರ ಮುಂಬೈ ಸ್ಫೋಟ ಪ್ರಕರಣ, 2008 ರಲ್ಲಿ ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿ ಸೇರಿದಂತೆ ಹಲವಾರು ಪ್ರಮುಖ ಮತ್ತು ಉನ್ನತ ಪ್ರಕರಣಗಳಲ್ಲಿ ಅವರು ರಾಜ್ಯವನ್ನು ಪ್ರತಿನಿಧಿಸಿದ್ದಾರೆ.
#LokSabhaElections2024 | BJP fields Special Public Prosecutor during 26/11 Mumbai Terror attack case, Ujjwal Nikam as its candidate from Mumbai North Central.
BJP's Poonam Mahajan is the sitting MP from the constituency. pic.twitter.com/0FbzDxDpQ6
— ANI (@ANI) April 27, 2024