ಉತ್ತರ ಕನ್ನಡ: ಟ್ರ್ಯಾಕ್ಟರ್ ನಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದಂತ ವೇಳೆಯಲ್ಲಿ ಭೀಕರ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಬಳಿಯಲ್ಲಿ ನಡೆದಿದೆ. ಟ್ರ್ಯಾಕ್ಟರ್ ಪಲ್ಟಿಯಾಗಿ 26ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇವರಲ್ಲಿ 8 ಮಕ್ಕಳ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಯಲ್ಲಿನ ಶಾಲೆಯೊಂದರ ಮಕ್ಕಳನ್ನು ಎರಡು ಟ್ರ್ಯಾಕ್ಟರ್ ನಲ್ಲಿ ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ಒಟ್ಟು 90 ವಿದ್ಯಾರ್ಥಿನಿಯರನ್ನು ಪ್ರವಾಸಕ್ಕೆ ಕೊಂಡೊಯ್ಯಲಾಗಿತ್ತು. ಈ ವೇಳೆ ಟ್ರ್ಯಾಕ್ಟರ್ ಒಂದರ ಚಾಲಕ ವೇಗವಾಗಿ ಟ್ರ್ಯಾಕ್ಟರ್ ಚಾಲನೆ ಮಾಡಿದಂತ ಸಂದರ್ಭದಲ್ಲಿ ಪಲ್ಟಿಯಾಗಿದೆ.
ಟ್ರ್ಯಾಕ್ಟರ್ ನಲ್ಲಿದ್ದಂತ ವಿದ್ಯಾರ್ಥಿನಿಯರಲ್ಲಿ 26ಕ್ಕೂ ಹೆಚ್ಚು ಮಂದಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಇನ್ನೂ ಎಂಟಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರಗೊಂಡಿರೋದಾಗಿ ಹೇಳಲಾಗುತ್ತಿದೆ. ಗಾಯಾಳು ವಿದ್ಯಾರ್ಥಿನಿಯರನ್ನು ಶಿರಸಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಶಿರಸಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS: ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ: ಬಾಡಿ ವಾರೆಂಟ್ ಜಾರಿಗೊಳಿಸಿದ ಕೋರ್ಟ್ | Murugha Sri
BIGG NEWS : ಬೆಂಗಳೂರಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ನಕಲಿ ನೋಟು ಜಾಲ ಪತ್ತೆ, 1.30 ಕೋಟಿ ಜಪ್ತಿ