BREAKING : ವಿಜಯಪುರದಲ್ಲಿ ಪೋಲೀಸರ ಭರ್ಜರಿ ಕಾರ್ಯಾಚರಣೆ : 79 ಲಕ್ಷ ಮೌಲ್ಯದ 28 ಕೆಜಿ ಗಾಂಜಾ ಜಪ್ತಿ, ಇಬ್ಬರು ಅರೆಸ್ಟ್!

ವಿಜಯಪುರ : ವಿಜಯಪುರದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಜಮೀನಿನಲ್ಲಿ ಅಕ್ರಮವಾಗಿ ಬೆಳೆದ 28 ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ತಿಕೋಟ ತಾಲೂಕಿನ ಯತ್ನಾಳ ಗ್ರಾಮದ ಬಳಿ ಹಸಿ ಗಾಂಜಾವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಚಿಕೋಟ ತಾಲೂಕಿನ ಯತ್ನಾಳ ಗ್ರಾಮದಲ್ಲಿ ಸೆನ್ ಠಾಣೆಯ ಡಿವೈಎಸ್ಪಿ ಸುನಿಲ್ ಕಾಂಬಳೆ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಇಬ್ಬರು ಆರೋಪಿಗಳನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ವಿಜಯಪುರ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.