ಬೆಳಗಾವಿ : ಮೀಸಲಾತಿ ಘೋಷಿಸಿದ್ರೆ ಸನ್ಮಾನ, ಇಲ್ಲವಾದಲ್ಲಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪುನರ್ ಎಚ್ಚರಿಕೆ ನೀಡಿದ್ದಾರೆ.
ಈ ವಿಚಾರದ ಕುರಿತು ಸಿಎಂ ಬೊಮ್ಮಾಯಿ ಸಂಪುಟ ಸಭೆಯಲ್ಲಿ ಪ್ರತಿಕ್ರಿಯೆ ನೀಡಿದ್ದು,ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ. ಕಾನೂನು ತಜ್ಞರ ಅಭಿಪ್ರಾಯ ಪಡೆದು ಈ ಬಗ್ಗೆ ನಿರ್ಧರಿಸುತ್ತೇವೆ, ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ, ಮುಂದಿನ ಸಂಪುಟ ಸಭೆಯಲ್ಲಿ ನೋಡೋಣ ಎಂದು ಹೇಳಿ ಕೆಲವೇ ನಿಮಿಷಗಳಲ್ಲಿ ಮೀಸಲಾತಿ ಘೋಷಣೆ ವಿಚಾರಕ್ಕೆ ಅಂತ್ಯ ಹಾಡಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಪಂಚಮಸಾಲಿ 2ಎ ಮೀಸಲಾತಿ ಒತ್ತಾಯಿಸಿ ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಪಂಚಮಸಾಲಿ ಸಮಾಜದಿಂದ ವಿರಾಟ್ ಸಮಾವೇಶ ಆರಂಭವಾಗಿದೆ,, ಸಮಾವೇಶದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದ್ದು, ಇಂದು ಮೀಸಲಾತಿ ಘೋಷಿಸಬೇಕು. ಘೋಷಿದರೆ ನಾವು ಸಿಎಂ ಗೆ ಸನ್ಮಾನ ಮಾಡುತ್ತೇವೆ, ಇಲ್ಲವಾದಲ್ಲಿ ಹೋರಾಟ ಮುಂದುವರೆಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಹೇಳಿದ್ದಾರೆ.
ಮೀಸಲಾತಿಗಾಗಿ ಆಗ್ರಹಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವ ಮುನ್ನ ಕೂಡಲಸಂಗಮ ಪಂಚಮಸಾಲಿ ಬಸವಜಯ ಮೃತ್ಯುಂಜಯ ಸ್ವಾಮೀಜನಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದ ವಿರಾಟ್ ಸಮಾವೇಶ ಆರಂಭವಾಗಿದೆ..ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣಸೌಧ ಮುಂಭಾಗ ನೂರು ಎಕರೆ ಪ್ರದೇಶದಲ್ಲಿ ಸಮಾವೇಶ ವೇದಿಕೆ ಸಿದ್ದತೆ ಮಾಡಲಾಗಿದೆ. 20 ಲಕ್ಷಕ್ಕೂ ಹೆಚ್ಚು ಜನರು ಸೇರುವುದರಿಂದ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
BIG NEWS : ದೇಶದಲ್ಲಿ ಕೊರೊನಾ ಆತಂಕ : ಮಾಸ್ಕ್ ಧರಿಸಿ, ವಿದೇಶಿ ಪ್ರಯಾಣ ಮಾಡದಂತೆ ಎಚ್ಚರಿಕೆ ನೀಡಿದ ವೈದ್ಯರು
‘ಆಪರೇಷನ್ ಚೀತಾ’ ಸಕ್ಸಸ್ : ಒಂದೇ ದಿನ ಬೋನಿಗೆ ಬಿದ್ದ ಎರಡು ಚಿರತೆ |Leopard Operation
BIGG NEWS: ಕರ್ನಾಟಕದಲ್ಲಿ ಕೊರೊನಾ ಆತಂಕ; ಏರ್ ಪೋರ್ಟ್ ನಲ್ಲಿ ಮತ್ತೆ ಸ್ಕ್ರೀನಿಂಗ್ ಆರಂಭ