ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಜೊತೆ ಸಭೆ ನಡೆಸಿ ಒಂದು ತೀರ್ಮಾನಕ್ಕೆ ಬರದೇ ಹೋದರೆ, ಮುಂಬರುವ ದಿನಗಳಲ್ಲಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಲಿಂಗಾಯತ ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.
ಬೆಳಗಾವಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೀಸಲಾತಿ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಅಕ್ಟೋಬರ್ 15ಕ್ಕೆ ಬನ್ನಿ ಮಾತನಾಡೋಣ ಎಂದು ದಿನಾಂಕ ಕೊಟ್ಟಿದ್ದರು.ಆದರೆ, ಕಳೆದ ಮೂರು ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ನಮಗೆ ಮಾಹಿತಿ ನೀಡಿದ್ದು, 15ರಂದು ಮುಖ್ಯಮಂತ್ರಿಗಳು ದೆಹಲಿಗೆ ಹೋಗುತ್ತಾರೆ ಎಂದು ಹೇಳಿದ್ದಾರೆ.
ಈ ವೇಳೆ ಮತ್ತೊಂದು ದಿನಾಂಕ ನೀಡುವಂತೆ ಕೇಳಿದ್ದೆವು. ಆದರೆ, ಇದುವರೆಗೂ ಯಾವುದೇ ದಿನಾಂಕ ಕೊಡದೆ ವಿಳಂಬ ಮಾಡುತ್ತಿದ್ದಾರೆ. ಆದರೆ ನಮ್ಮ ವಕೀಲರು ಅವರು ದಿನಾಂಕ ಕೊಡಲಿ ಬಿಡಲಿ ಅಕ್ಟೋಬರ್ 18ರಂದು ದೆಹಲಿಗೆ ಹೋಗೋಣ ಅಲ್ಲಿ ಎಲ್ಲಿ ಯಾವ ಸ್ಥಳದಲ್ಲಿ ಭೇಟಿಯಾಗುತ್ತಾರೆ ನೋಡೋಣ ಒಂದು ವೇಳೆ ಭೇಟಿಯಾದಗದೆ ಹೋದರೆ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.