ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸುವ ಮೂಲಕ ಆಡಳಿತಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಪಕ್ಷ ಜನರ ಸಮಸ್ಯೆಯನ್ನು ಆಲಿಸಲು ಜನಸ್ಪಂದನ ಕಾರ್ಯಕ್ರಮ ಆರಂಭಿಸಿತ್ತು. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಒಂದು ದಿನ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದು ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎರಡನೇ ಹಂತದ ಜನಸ್ಪಂದನ ಕಾರ್ಯಕ್ರಮ ಇಂದು ನಡೆಸಲಿದ್ದಾರೆ.
ಈಗಾಗಲೇ ಒಂದನೇ ಹಂತದಲ್ಲಿ ದಿನಸ್ಪಂದನ ಕಾರ್ಯಕ್ರಮ ನಡೆಸಿರುವ ಡಿಸಿಎಂ ಡಿಕೆ ಶಿವಕುಮಾರ್, ಇಂದಿನಿಂದ ಎರಡನೇ ಹಂತದ ಜನ ಸ್ಪಂದನಾ ಕಾರ್ಯಕ್ರಮ ಆಯೋಜಿಸಿದ್ದು, ವಲಯವಾರು ಜನಸ್ಪಂದನಾ ಕಾರ್ಯಕ್ರಮವನ್ನು ಉಪಮುಖ್ಯಮಂತ್ರಿಗೆ ಶಿವಕುಮಾರ್ ನಡೆಸುತ್ತಿದ್ದಾರೆ. ಅದೇ ರೀತಿಯಾಗಿ ಇಂದು ಬೊಮ್ಮನಹಳ್ಳಿ ವಲಯದಲ್ಲಿ ಡಿಕೆ ಶಿವಕುಮಾರ್ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದ್ದಾರೆ.
ಜರಗನಹಳ್ಳಿಯ ಸರ್ಕಾರಿ ಶಾಲೆಯ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು ಇಂದು ಬೆಳಿಗ್ಗೆ 9:30ಕ್ಕೆ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ಆರಂಭವಾಗಲಿದೆ ಸ್ಥಳೀಯ ಜನರಿಂದ ಉಪಮುಖ್ಯಮಂತ್ರಿ ಎ ಡಿ ಕೆ ಶಿವಕುಮಾರ್ ಅ ಹವಾಲು ಸ್ವೀಕರಿಸಲಿದ್ದಾರೆ ಜನಸ್ಪಂದನ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಬೊಮ್ಮನಹಳ್ಳಿ ಹಾಗೂ ಆನೇಕಲ್ ವಿಧಾನಸಭೆ ಕ್ಷೇತ್ರದ ಜನರ ಅಹವಾಲನ್ನು ಸ್ವೀಕರಿಸಲಿದ್ದಾರೆ.