ಬೆಂಗಳೂರು: ಮೇ.4ರಂದು ನಡೆಸಲು ನಿಗದಿ ಪಡಿಸಲಾಗಿದ್ದಂತ ದ್ವಿತೀಯ ಪಿಯುಸಿ ಪರೀಕ್ಷೆ-2ರ ಹೋಂ ಸೈನ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಅಲ್ಲೇ ಮತ್ತೊಂದು ಹೊಸ ದಿನಾಂಕಕ್ಕೆ ಪರೀಕ್ಷೆಯನ್ನು ನಿಗದಿ ಪಡಿಸಿದೆ.

ಈ ಸಂಬಂಧ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ದಿನಾಂಕ 04-05-2024ರಂದು ಗೃಹ ವಿಜ್ಞಾನ ಪರೀಕ್ಷೆಯನ್ನು ಬೆಳಿಗ್ಗೆ 10.15ರಿಂದ 1.30ರವರೆಗೆ ನಡೆಸಲು ನಿಗದಿ ಪಡಿಸಲಾಗಿತ್ತು ಎಂದಿದ್ದಾರೆ.

ಮೇ.4ರಂದು ನಡೆಸಲು ನಿಗದಿ ಪಡಿಸಲಾಗಿದ್ದಂತ ಗೃಹ ವಿಜ್ಞಾನ, ಹೋಂ ಸೈನ್ಸ್ ವಿಷಯ ಸಂಕೇತ-67ರ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಮೇ.4ರ ಬದಲಾಗಿ ಮೇ.5ರಂದು ಬೆಳಿಗ್ಗೆ 10.15 ರಿಂದ 1.30ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

BREAKING : `EVM’ ಕಾರ್ಯನಿರ್ವಹಣೆ ಬಗ್ಗೆ ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂಕೋರ್ಟ್ | Supreme Court

ಸಾರ್ವಜನಿಕರೇ ಎಚ್ಚರ : ವಾಟ್ಸಪ್ ನಿಂದ ‘ಸ್ಟಾಕ್ ಮಾರ್ಕೆಟ್’ ಆಪ್ ಡೌನ್ಲೋಡ್ ಮಾಡಿಕೊಂಡು 5.2 ರೂ. ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ!

Share.
Exit mobile version