ಬೆಂಗಳೂರು: ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಮೊದಲ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಈ ಮೊದಲ ದಿನದ ದ್ವಿತೀಯ ಪಿಯುಸಿ ಪರೀಕ್ಷೆಗೆ 5,07,556 ವಿದ್ಯಾರ್ಥಿಗಳು ಹಾಜರಾಗಿದ್ದರೇ, 18,231 ಗೈರು ಹಾಜರಾಗಿದ್ದಾರೆ. ಅಲ್ಲದೇ ಪರೀಕ್ಷೆಯಲ್ಲಿ ನಕಲು ಮಾಡಲು ಪ್ರಯತ್ನಿಸಿದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.
ಈ ಕುರಿತಂತೆ ದ್ವಿತೀಯ ಪಿಯು ಪರೀಕ್ಷಾ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 01-03-2024ರ ಇಂದು ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆ-1ಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಅರೇಬಿಕ್ ವಿಷಯದ ಪರೀಕ್ಷೆಗಳು ನಡೆದವು. ಈ ಪರೀಕ್ಷೆಗೆ 5,25,787 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 5,07,556 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರೋದಾಗಿ ತಿಳಿಸಿದೆ.
ಇನ್ನೂ 5,25,787 ನೋಂದಾಯಿಸಿದಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ 18,231 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆಯಲ್ಲಿ ಗೈರಾಗಿದ್ದಾರೆ. ಶೇ.96.53ರಷ್ಟು ಹಾಜರಾತಿ ತೋರಿಬಂದಿದೆ ಎಂದು ತಿಳಿಸಿದೆ.
ಇಂದು ಕನ್ನಡ ಮತ್ತು ಅರೇಬಿಕ್ ವಿಷಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ನಕಲು ಮಾಡಲು ಪ್ರಯತ್ನಿಸಿದಂತ ಓರ್ವ ವಿದ್ಯಾರ್ಥಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಬಾರ್ ಮಾಡಲಾಗಿದೆ ಎಂಬುದಾಗಿ ಹೇಳಿದೆ.
ರಾಜ್ಯ ಸರ್ಕಾರದಿಂದ ‘ಗೃಹ ಜ್ಯೋತಿ ಯೋಜನೆ’ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ | Gruha Jyothi Scheme
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ