ಬೆಂಗಳೂರು: ಮಾ. 7ರಂದು ನಡೆದ ದ್ವಿತೀಯ ಪಿಯುಸಿ ಭೌತಶಾಸ್ತ್ರ ಪರೀಕ್ಷೆಗೆ ಕೃಪಾಂಕ ನೀಡಲಾಗಿದೆ ಎಂಬ ಸಂದೇಶವೊಂದು ಸಾಮಾಜಿಕ ತಾಣಗಳಲ್ಲಿ ಸುದ್ದಿಯೊಂದನ್ನುಕಿಡಿಗೇಡಿಗಳು ಹರಿಬಿಟ್ಟಿದ್ದು,ಇದಕ್ಕೆ ಸಂಬಂಧಪಟ್ಟಂತೆ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟನೆ ನೀಡಿದೆ.
BIGG NEWS: CAA ಅನುಷ್ಠಾನಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಮುಸ್ಲಿಂ ಸಂಘಟನೆ!
ದೇಶದತ್ತ ಗಮನ ಹರಿಸಲು ಬಯಸುತ್ತೇನೆ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ‘ಮಲ್ಲಿಕಾರ್ಜುನ ಖರ್ಗೆ’ ನಕಾರ
ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸ್ಪಷ್ಟನೆ ನೀಡಿರುವ ಪ್ರಕಾರ, ಈ ಸುಳ್ಳು ಸುದ್ದಿಯಿಂದ ವಿದ್ಯಾರ್ಥಿಗಳು ಮತ್ತು ಪಾಲಕರು ದಾರಿ ತಪ್ಪುವುದು ಮತ್ತು ತಪ್ಪು ಮಾಹಿತಿಯನ್ನು ಪಡೆಯುವುದ ಬೇಡ. ಇದೊಂದು ನಕಲು ಪ್ರತಿಯಾಗಿದ್ದು, ಮಂಡಳಿಯಿಂದ ಇಂತಹ ಯಾವುದೇ ಆದೇಶಗಳನ್ನು ಮತ್ತು ನಿರ್ಧಾರಗಳನ್ನು ಕೈಗೊಂಡಿಲ್ಲ. ಎಂದು ಮಂಡಳಿ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ.