ಬೆಂಗಳೂರು: ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ಫಲಿತಾಂಶವನ್ನು (2nd PUC Result) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.ಅಂದ ಹಾಗೇ ಪ್ರತೀ ವರ್ಷದಂತೆ ಈ ಬಾರಿ ಕೂಡ ಬಾಲಕಿಯರೇ (80.25%) ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನ ವಿಭಾಗ 89.96% , ವಾಣಿಜ್ಯ ವಿಭಾಗ 80.94%, ಕಲಾ ವಿಭಾಗದಲ್ಲಿ 68.36 % ಫಲಿತಾಂಶ ಬಂದಿದೆ.

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿ ಗಳು – 6,98,378
ತೇರ್ಗಡೆಯಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 5,52690
ಶೇಕಾಡ 85% ಹಾಗೂ ಅದಕ್ಕಿಂತ ಹೆಚ್ಚಿನ ಅಂಕ – 1,53,370
ಶೇಕಡಾ 60% – 2,89733
ದ್ವಿತೀಯ ದರ್ಜೆ- 72,098
ತೃತೀಯ ದರ್ಜೆಯಲ್ಲಿ ಉತ್ತೀರ್ಣರಾದವರು – 37,489
ವಿದ್ಯಾರ್ಥಿಗಳ ಫಲಿತಾಂಶ ಹಾಳೆಯನ್ನು KSEABಯ ಪಿಯು ಪರೀಕ್ಷಾ ಪೋರ್ಟಲ್ ಲಾಗಿನ್ ಮೂಲಕ ಆಯಾ ಕಾಲೇಜುಗಳಿಗೆ ಕಳುಹಿಸಲಾಗುತ್ತದೆ.ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ: ಸ್ಕ್ಯಾನ್ ಪ್ರತಿ ಹಾಗೂ ಮರುಮೌಲ್ಯಮಾಪನ ಶುಲ್ಕವನ್ನು ಪಾವತಿಸಲು ಆನ್‌ಲೈನ್ ನಲ್ಲಿ ಮತ್ತು ಆಫ್‌ಲೈನ್ ನಲ್ಲಿ ಚಲನ್ ಮುಖಾಂತರ ಪಾವತಿ ಸೌಲಭ್ಯ ಲಭ್ಯವಿರುತ್ತದೆ.

Share.
Exit mobile version