ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ 2024-25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಮಂಡಳಿಯು, 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ “ಅಂತಿಮ ವೇಳಾಪಟ್ಟಿ” ಯನ್ನು ಮಂಡಲಿಯ ಜಾಲತಾಣದಲ್ಲಿ ದಿನಾಂಕ:10-01-2025 ರಂದು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ ದಲ್ಲಿ ಪ್ರಕಟಿಸಿ ವಿದ್ಯಾರ್ಥಿಗಳಿಗೆ
ಮಾಹಿತಿ ನೀಡಲು ತಿಳಿಸಿದೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ದಿನಾಂಕ 01-03-2025ರ ಶನಿವಾರದಿಂದ ಆರಂಭಗೊಂಡು, ದಿನಾಂಕ 20-03-2025ರ ಗುರುವಾರದವರೆಗೆ ನಡೆಯಲಿವೆ. ಆ ವಿಷಯವಾರು ಅಂತಿಮ ವೇಳಾಪಟ್ಟಿ ಈ ಕೆಳಗಿನಂತಿದೆ.
ಇನ್ನೂ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1 ದಿನಾಂಕ 21-03-2025ರ ಶುಕ್ರವಾರದಿಂದ ಆರಂಭಗೊಳ್ಳಲಿದೆ. ದಿನಾಂಕ 04-04-2025ರ ಶುಕ್ರವಾರದಂದು ಮುಕ್ತಾಯಗೊಳ್ಳಲಿದೆ. ಆ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ-1ರ ವಿಷಯವಾರು ಅಂತಿಮ ವೇಳಾಪಟ್ಟಿ ಈ ಕೆಳಗಿದೆ.