ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆದ ಉಗ್ರರ ದಾಳಿಯಲ್ಲಿ ಗಾಯಗೊಂಡ ನಾಗರಿಕರೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ನಂತರ ಸಾವಿನ ಸಂಖ್ಯೆ ನಾಲ್ಕಕ್ಕೇರಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಗಾಯಗೊಂಡ ಒಂಬತ್ತು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರಲ್ಲಿ ಕೆಲವರ ಸ್ಥಿತಿ ತುಂಬಾ ಗಂಭೀರವಾಗಿದೆ ಎಂದು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜಿನ ವೈದ್ಯರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕೆಲವರನ್ನು ವಿಮಾನದಲ್ಲಿ ಜಮ್ಮುವಿಗೆ ರವಾನಿಸಲಾಗಿದೆ. ಮೃತರನ್ನು ದೀಪಕ್ ಕುಮಾರ್, ಸತೀಶ್ ಕುಮಾರ್ ಮತ್ತು ಪ್ರೀತಮ್ ಲಾಲ್ ಮತ್ತು ಶಿವಪಾಲ್ಎಂದು ಗುರುತಿಸಲಾಗಿದೆ.
ನಿನ್ನೆ ಸಂಜೆ ಡಾಂಗ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇಬ್ಬರು ಶಸ್ತ್ರಸಜ್ಜಿತ ಭಯೋತ್ಪಾದಕರು ಮೂರು ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಉಗ್ರರ ಪತ್ತೆಗೆ ವ್ಯಾಪಕ ಶೋಧ ಕಾರ್ಯಾಚರಣೆ ಮುಂದುವರೆದಿದೆ.
3 people killed & 7 others injured in firing incident in Dangri area of Rajouri. Injured are being treated. Police & Dist administration have reached the spot. Multiple bullet injuries found on the body of injured: Dr Mehmood, Medical Superintendent, Associated Hospital, Rajouri https://t.co/obY9JP0NE6 pic.twitter.com/oG4VsXIWKH
— ANI (@ANI) January 1, 2023
ನಿನ್ನೆ(ಭಾನುವಾರ) ಸಂಜೆ ಡಾಂಗ್ರಿ ಗ್ರಾಮದಲ್ಲಿ ಇಬ್ಬರು ಶಸ್ತ್ರಸಜ್ಜಿತ ಉಗ್ರರು ಮೂರು ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಿಂದ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಪೊಲೀಸರು, ಭದ್ರತಾ ಪಡೆಗಳುಗ್ರಾಮಕ್ಕೆ ತೆರಳಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆಸಿವೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.
ಈ ದಾಳಿ ಜಿಲ್ಲೆಯಲ್ಲಿ ತಲ್ಲಣ ಮೂಡಿಸಿದೆ. ಘಟನೆಯನ್ನು ವಿರೋಧಿಸಿ ಮತ್ತು ಶೀಘ್ರ ಕ್ರಮಕ್ಕೆ ಆಗ್ರಹಿಸಿ ಇಂದು ಹಲವು ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಬಂದ್ ಕರೆಗೆ ಬಿಜೆಪಿ ಬೆಂಬಲ ನೀಡಿದೆ.
ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ನಾಗರಿಕರ ಹತ್ಯೆಯ ಎರಡನೇ ಘಟನೆ ಇದಾಗಿದೆ. ಡಿಸೆಂಬರ್ 16 ರಂದು ರಾಜೌರಿಯ ಸೇನಾ ಶಿಬಿರದ ಹೊರಗೆ ಇಬ್ಬರು ನಾಗರಿಕರು ಕೊಲ್ಲಲ್ಪಟ್ಟರು.
BIGG NEWS : ವಿಕಲಚೇತನ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
BIGG NEWS : ವಿಕಲಚೇತನ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ