Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳೆ ಇಕ್ಕೇರಿಯ ಜಯಂತ್ ಗಸಗಸೆಕೊಡ್ಲು ಆತ್ಮಹತ್ಯೆಗೆ ಯತ್ನ

20/04/2026 10:08 PM

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM

ರಾಹುಲ್‌ ಗಾಂಧಿ ಪೌರತ್ವ ಪ್ರಕರಣ: ಅರ್ಜಿದಾರನ ‘ಅಸಭ್ಯ’ ಪೋಸ್ಟ್‌ಗೆ ನ್ಯಾಯಾಧೀಶರ ಕೆಂಡಾಮಂಡಲ!

20/04/2026 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಗ್ರೇಟರ್ ಬೆಂಗಳೂರು’ ಪ್ರಾಧಿಕಾರ ರಚನೆ ಕುರಿತು 3 ದಿನ ಸಭೆ : ಸಾರ್ವಜನಿಕರಿಂದ ಸಲಹೆ ಸ್ವೀಕಾರ
KARNATAKA

BIG NEWS : ‘ಗ್ರೇಟರ್ ಬೆಂಗಳೂರು’ ಪ್ರಾಧಿಕಾರ ರಚನೆ ಕುರಿತು 3 ದಿನ ಸಭೆ : ಸಾರ್ವಜನಿಕರಿಂದ ಸಲಹೆ ಸ್ವೀಕಾರ

By kannadanewsnow0506/02/2025 7:13 AM

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024 ರಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ನಗರದಲ್ಲಿ 3 ದಿನಗಳ ಕಾಲ 5 ಕಡೆ ಎಲ್ಲಾ ಎಂಟು ವಲಯಗಳನ್ನು ಒಳಗೊಂಡಂತೆ ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸುವ ಸಭೆಗಳನ್ನು ಆಯೋಜನೆ ಮಾಡಲಾಗುತ್ತಿದೆ.

ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರ ಪರಿಶೀಲನೆ ಮತ್ತು ವರದಿಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದ್ದು, ಆ ಸಮಿತಿಗೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ರವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ.

ಗ್ರೇಟರ್ ಬೆಂಗಳೂರು ಪ್ರದೇಶದ ಅಭಿವೃದ್ಧಿಯ ಯೋಜನೆ, ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ, ಪರಿಣಾಮಕಾರಿಯಾದ, ಸಹಭಾಗಿತ್ವದ ಮತ್ತು ಸ್ಪಂದನಶೀಲ ಆಡಳಿತಕ್ಕಾಗಿ, ನಗರಾಡಳಿತದ ಮೂಲಕ ಘಟಕಗಳನ್ನಾಗಿಸುವುದಕ್ಕೆ ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಸುಗಮಗೊಳಿಸುವುದಕ್ಕೆ ಹಾಗೂ ಸಹಭಾಗಿ, ದಕ್ಷ ಮತ್ತು ನ್ಯಾಯೋಚಿತ ಆಡಳಿತದ ಚೌಕಟ್ಟನ್ನು ಸ್ಥಾಪಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಜಾರಿಗೆ ತರಲಾಗುತ್ತಿದೆ.

ಮುಂದುವರಿದು, ಮೇಲ್ಕಂಡ ವಿಷಯಗಳನ್ನು ಕೂಲಂಕುಷವಾಗಿ ಪರಿಶೀಲಿಸುವ ಸಲುವಾಗಿ ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿ ರಚಿಸಲಾಗಿದ್ದು, ಸದರಿ ಸಮಿತಿಯು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಸಾರ್ವಜನಿಕರು/ಸಂಘ-ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸಲಿದ್ದು, ವಲಯವಾರು ಸಭೆಗಳನ್ನು ಆಯೋಜಿಸಲಾಗಿದೆ. ಅದರ ವಿವರ ಈ ಕೆಳಕಂಡತಿದೆ.

ಪೂರ್ವ ವಲಯ:

ಪೂರ್ವ ವಲಯದಲ್ಲಿ 10ನೇ ಫೆಬ್ರವರಿ 2025 ರಂದು ವಸಂತನಗರ ತಿಮ್ಮಯ್ಯ ರಸ್ತೆಯಲ್ಲಿ ಬರುವ ಬಂಜಾರ ಭವನದಲ್ಲಿ ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.

ಮಹದೇವಪುರ ವಲಯ:

ಮಹದೇವಪುರ ವಲಯದಲ್ಲಿ 10ನೇ ಫೆಬ್ರವರಿ 2025 ರಂದು ಕೆ.ಆರ್ ಪುರ ಟಿಸಿ ಪಾಳ್ಯದ ಹತ್ತಿರವಿರುವ ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮಧ್ಯಾಹ್ನ 03.00 ರಿಂದ ಸಂಜೆ 05.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.

ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯ:

ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯಗಳು ಸೇರಿದಂತೆ 11ನೇ ಫೆಬ್ರವರಿ 2025 ರಂದು ಜೆ.ಪಿ ನಗರ 1ನೇ ಹಂತದಲ್ಲಿ ಬರುವ ಆರ್.ವಿ ಡೆಂಟಲ್ ಕಾಲೇಜಿನಲ್ಲಿ ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.

ರಾಜರಾಜೇಶ್ವರಿ ನಗರ ಹಾಗೂ ಪಶ್ಚಿಮ ವಲಯ:

ರಾಜರಾಜೇಶ್ವರಿ ನಗರ ಹಾಗೂ ಪಶ್ಚಿಮ ವಲಯಗಳು ಸೇರಿದಂತೆ 11ನೇ ಫೆಬ್ರವರಿ 2025 ರಂದು ಬೆಂಗಳೂರು ವಿಶ್ವವಿದ್ಯಾನಿಲಯ ಜ್ಞಾನಭಾರತಿ ಕ್ಯಾಂಪಸ್ ನಲ್ಲಿರುವ ಡಾ. ಹೆಚ್. ನರಸಿಂಹತ್ತ ಸಭಾಂಗಣದಲ್ಲಿ ಮಧ್ಯಾಹ್ನ 03.00 ರಿಂದ ಸಂಜೆ 05.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.

ಯಲಹಂಕ ಹಾಗೂ ದಾಸರಹಳ್ಳಿ ವಲಯ:

ಯಲಹಂಕ ಹಾಗೂ ದಾಸರಹಳ್ಳಿ ವಲಯ ಸೇರಿದಂತೆ 12ನೇ ಫ್ರೆಬ್ರವರಿ 2025 ರಂದು ಯಲಹಂಕ ನ್ಯೂಟೌನ್ ನಲ್ಲಿ ಬರುವ ಡಾ. ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ 3 ದಿನಗಳ ಕಾಲ 5 ಕಡೆ ಪಾಲಿಕೆಯ ಎಲ್ಲಾ ಎಂಟು ವಲಯಗಳಿಗೆ ಸಂಬಂಧಿಸಿಂತೆ ಸಭೆ ನಡೆಯಲಿದ್ದು, ಈ ಸಭೆ ಸ್ಥಳೀಯ ನಾಗರೀಕರು, ಸಂಘ ಸಂಸ್ಥೆಗಳು ಹಾಗು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹೆಚ್ಚಿನ ಸಮಖ್ಯೆಯಲ್ಲಿ ಆಗಮಿಸಿ ತಮ್ಮ ಅತ್ಯಮೂಲ್ಯವಾದ ಸಲಹೆಗಳನ್ನು ನೀಡಲು ಕೋರಿದೆ.

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳೆ ಇಕ್ಕೇರಿಯ ಜಯಂತ್ ಗಸಗಸೆಕೊಡ್ಲು ಆತ್ಮಹತ್ಯೆಗೆ ಯತ್ನ

20/04/2026 10:08 PM1 Min Read

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM1 Min Read

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM2 Mins Read
Recent News

ಶಿವಮೊಗ್ಗ: ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳೆ ಇಕ್ಕೇರಿಯ ಜಯಂತ್ ಗಸಗಸೆಕೊಡ್ಲು ಆತ್ಮಹತ್ಯೆಗೆ ಯತ್ನ

20/04/2026 10:08 PM

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM

ರಾಹುಲ್‌ ಗಾಂಧಿ ಪೌರತ್ವ ಪ್ರಕರಣ: ಅರ್ಜಿದಾರನ ‘ಅಸಭ್ಯ’ ಪೋಸ್ಟ್‌ಗೆ ನ್ಯಾಯಾಧೀಶರ ಕೆಂಡಾಮಂಡಲ!

20/04/2026 9:21 PM

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM
State News
KARNATAKA

ಶಿವಮೊಗ್ಗ: ಸಾಗರದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳೆ ಇಕ್ಕೇರಿಯ ಜಯಂತ್ ಗಸಗಸೆಕೊಡ್ಲು ಆತ್ಮಹತ್ಯೆಗೆ ಯತ್ನ

By kannadanewsnow0920/04/2026 10:08 PM KARNATAKA 1 Min Read

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಹಳೆ ಇಕ್ಕೇರಿಯ ಗಸಗಸೆಕೊಡ್ಲು ಗ್ರಾಮ ಜಯಂತ್ ಎಂಬುವರು ವಿಷ…

2026–27ನೇ ಸಾಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮೊದಲ ಕಂತಿನ ಅನುದಾನ ಬಿಡುಗಡೆ

20/04/2026 9:28 PM

ಕರ್ನಾಟಕ ಮಾದರಿಯಲ್ಲಿ ತಮಿಳುನಾಡಿನ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ಹಣ: ಡಿಸಿಎಂ ಡಿ.ಕೆ.ಶಿವಕುಮಾರ್

20/04/2026 9:21 PM

ಸಿಇಟಿ ಪರೀಕ್ಷೆ 2026: ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಕಿವಿಯೋಲೆ, ಉಂಗುರಕ್ಕೂ ನಿರ್ಬಂಧ; ಮಂಗಳಸೂತ್ರಕ್ಕೆ ವಿನಾಯಿತಿ

20/04/2026 9:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.