ಬೆಂಗಳೂರು: ನಗರದ ಸರ್ ಎಂ ವಿಶ್ವೇಶ್ವರಯ್ಯ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮೂರು ದಿನಗಳ ವಿಚಾರ ಸಂಕೀರಣ ಯಶಸ್ವಿಯಾಗಿ ನಡೆಯಿತು.
AICTE, Delhi ಅವರ ಸಹಯೋಗದೊಂದಿಗೆ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗ, ಸರ್ ಎಂ ವಿಶ್ವೇಶ್ವರಯ್ಯ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು ರವರು AICTE-VAANI ಯೋಜನೆಯಡಿ ದಿನಾಂಕ 19-08-2024 ರಿಂದ 21-08-2024 ರವರೆಗೆ “ಸ್ಥಳೀಯ ಭಾಷೆಯ ಮೂಲಕ ಇಂಧನ ಸಬಲೀಕರಣ, ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಯಲ್ಲಿ ಆವಿಷ್ಕಾರಗಳು” ಎಂಬ ವಿಷಯದ ಬಗ್ಗೆ ಆಯೋಜಿಸಿರುವ ಮೂರು ದಿನಗಳ ವಿಚಾರ ಸಂಕಿರಣವನ್ನು ಲತಾ ಎನ್ ಪಾಟೀಲ್, ಸಹಾಯಕ ಪ್ರಧಾನ ವ್ಯವಸ್ಥಾಪರು, ಕ್ರೆಡಲ್ ರವರು ಉದ್ಘಾಟಿಸಿದರು.
ಈ ವಿಷಯದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಡಾ. ಹೆಚ್ ಎಲ್ ಸುರೇಶ್, ವಿಭಾಗದ ಮುಖ್ಯಸ್ಥರು, ಡಾ ಮಹೇಶ ಕೆ., ಪ್ರಾಧ್ಯಾಪಕರು ಮತ್ತು ಡಾ ಕೆ.ಎಸ್ ಶಣ್ಮುಖರಾಧ್ಯ, ಯಾಂತ್ರಿಕ ವಿಭಾಗದ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದರು.
ವಿವಿಧ ವಿಶ್ವವಿದ್ಯಾಲಯಗಳ ಅಧ್ಯಾಪಕರುಗಳು, ಕೈಗಾರಿಕಾ ಪ್ರತಿನಿಧಿಗಳು, ಸಾತಕೋತ್ತರ ಪದವಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಬಾಗಿನ ಅರ್ಪಣೆ
ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿರುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ