ನವದೆಹಲಿ: ಆಜಾದ್ ಮಾರ್ಕೆಟ್ ಪ್ರದೇಶದಲ್ಲಿ ಶುಕ್ರವಾರ ನಿರ್ಮಾಣ ಹಂತದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ.
ಬೆಳಿಗ್ಗೆ ೮:೫೦ ರ ಸುಮಾರಿಗೆ ಕಟ್ಟಡವು ಇದ್ದಕ್ಕಿದ್ದಂತೆ ಕುಸಿದಾಗ ಕಟ್ಟಡದಲ್ಲಿ ಕೆಲಸ ನಡೆಯುತ್ತಿತ್ತು. ಪ್ರಾಥಮಿಕ ವರದಿಗಳ ಪ್ರಕಾರ, ಅಪಘಾತದಲ್ಲಿ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದು, ಕನಿಷ್ಠ ಐದು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ.
ರಕ್ಷಣಾ ಪ್ರಯತ್ನಗಳು ನಡೆಯುತ್ತಿವೆ. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ಸಿಬ್ಬಂದಿ ರವಾನಿಸಲಾಗಿದೆ.