ಮೈಸೂರು : ಮೈಸೂರಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು, ಆಕಸ್ಮಿಕ ಬೆಂಕಿಯಿಂದ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ತಾಲೂಕಿನ ಬೋರೆ ಆನಂದೂರಿನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ,ಮನೆಯಲ್ಲಿ ಯಾರು ಇಲ್ಲದಿದ್ದ ರಿಂದ ಭಾರಿ ಅನಾಹುತ ಒಂದು ತಪ್ಪಿದೆ.
ಮೈಸೂರು ತಾಲೂಕಿನ ಬೋರೆ ಆನಂದೂರಿನ ಶನಿವಾರೆಗೌಡ, ವೆಂಕಟೇಶ್ ಗೌಡ ಹಾಗು ಶ್ರೀನಿವಾಸಗೌಡ ಎಂಬುವವರ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಮೂರು ಮನೆಗಳಲ್ಲಿ ಇದ್ದಂತಹ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಆಗಮಿಸಿ ಅಭಿಷಾಮಕದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.