ಮೈಸೂರು: ಮೈಸೂರಿನಲ್ಲಿ ಪಿಎಫ್ಐ ಜಿಲ್ಲಾಧ್ಯಕ್ಷ ಸೇರಿದಂತೆ ಮೂವರನ್ನು ಸ್ಥಳೀಯ ಪೊಲೀಸರು ವಶಕ್ಕೆ ಪಡೆದು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.
ಪಿಎಫ್ಐ ಸಂಘಟನೆಯ ಕಚೇರಿ ಮೇಲೆ ಹಾಗೂ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿ ಪಿಎಫ್ಐ ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಆ ವಿಚಾರಣೆ ಸಂದರ್ಭದಲ್ಲಿ ಕೆಲವು ಮಾಹಿತಿಗಳು ಹೊರಬಿದ್ದಿವೆ. ಎನ್ಐಎ ಅಧಿಕಾರಿಗಳು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿಗೆ ಮಾಹಿತಿ ನೀಡಿದ್ದು, ಆ ಮಾಹಿತಿಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಪಿಎಫ್ಐ ಜಿಲ್ಲಾಧ್ಯಕ್ಷ ಬಿಲಾಲ್ ಷರೀಫ್ ಅವರನ್ನು ಕಲ್ಯಾಣಗಿರಿ ನಿವಾಸದಲ್ಲಿ ವಶಕ್ಕೆ ಪಡೆದು ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ.