ರಾಜಸ್ಥಾನ: ರಾಜಸ್ಥಾನದ ಸಿಕಾರ್ನಲ್ಲಿರುವ ಖತು ಶ್ಯಾಮ್ ಜಿ ದೇವಸ್ಥಾನದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಜೈಪುರದ ಆಸ್ಪತ್ರೆಗೆ ರವಾನಿಸಲಾಗಿದೆ.
ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಈ ಕಾಲ್ತುಳಿತ ಸಂಭವಿಸಿದೆ. ಪೊಲೀಸರ ಪ್ರಕಾರ, ದೇವಾಲಯದ ಹೊರಗೆ ದೊಡ್ಡ ಜನಸಂದಣಿಯು ಗೇಟ್ ತೆರೆಯುವವರೆಗೆ ಕಾಯುತ್ತಿತ್ತು. ಗೇಟ್ಗಳು ತೆರೆದು ಜನರು ಒಳಗೆ ತಳ್ಳಲು ಪ್ರಯತ್ನಿಸಿದಾಗ ಮಹಿಳೆಯೊಬ್ಬರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಇದರಿಂದಾಗಿ ಅವರ ಹಿಂದೆ ಇದ್ದವರು ಸಹ ಬಿದ್ದಿದ್ದಾರೆ. ಈ ವೇಳೆ ಮೂವರು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದು, ಇಬ್ಬರಿಗೆ ಗಾಯವಾಗಿದೆ.
Rajasthan | Three people died, several injured at Khatu Shyamji Temple in Sikar where a stampede occurred during a monthly fair, earlier this morning. Two injured people referred to a hospital in Jaipur. Police present at the spot. Further details awaited. pic.twitter.com/bgnL9sRr1j
— ANI MP/CG/Rajasthan (@ANI_MP_CG_RJ) August 8, 2022
ಸುದ್ದಿ ತಿಳಿದು ಕೂಡಲೇ ದೇವಸ್ಥಾನಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿ ಗುಂಪನ್ನು ನಿಯಂತ್ರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಜನಸಂದಣಿಯನ್ನು ನಿಯಂತ್ರಿಸಲಾಗುತ್ತಿದೆ ಎಂದು ಸಿಕಾರ್ನ ಪೊಲೀಸ್ ಎಸ್ಪಿ ಕುನ್ವರ್ ರಾಷ್ಟ್ರದೀಪ್ ತಿಳಿಸಿದ್ದಾರೆ.
ಇಂದು, ಚಂದ್ರನ ಕ್ಯಾಲೆಂಡರ್ನ 11ನೇ ದಿನವು ಭಗವಾನ್ ಕೃಷ್ಣನ ಅವತಾರವೆಂದು ನಂಬಲಾದ ಖತು ಶ್ಯಾಮ್ ಜಿಯ ದರ್ಶನಕ್ಕೆ ಮಂಗಳಕರವೆಂದು ಪರಿಗಣಿಸಲಾಗಿದೆ. ಖಾತು ಶ್ಯಾಮ್ ಜಿ ದೇವಸ್ಥಾನವು ರಾಜಸ್ಥಾನದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿಗೆ ಸಾವಿರಾರು ಮಂದಿ ಭಕ್ತರು ಆಗಮಿಸುತ್ತಾರೆ.
BIGG BREAKING NEWS : ಮಂಗಳೂರಿನಲ್ಲಿ `ಪ್ರವೀಣ್ ನೆಟ್ಟಾರು’ ಹತ್ಯೆ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್!