ಬೆಂಗಳೂರು : ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಕಲುಷಿತಗೊಳ್ಳದಂತೆ ಎಚ್ಚರಿಕೆ ನೀಡಲಾಗಿದ್ದು ಈ ಹಿನ್ನೆಲೆಯಲ್ಲಿ ಗ್ರಾಮೀಣ ನೀರು ಸರಬರಾಜು ಅಧಿಕಾರಿಗಳು ಹಾಗೂ ಎಂಜನಿಯರುಗಳು ಈ ತಿಂಗಳ 14ರಿಂದ 21ರವರೆಗಿನ ವಾರದಲ್ಲಿ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಮೂರು ಲಕ್ಷ ನೀರಿನ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಬಳಿಯ ಮುಣಜೇನಹಳ್ಳಿ ಹಾಗೂ ಬೆಳಗಾವಿ ಜಿಲ್ಲೆಯ ಗೋಕಾಕ್‌ ಬಳಿಯ ಕನಸಗೇರಿ ಗ್ರಾಮದಲ್ಲಿ ಈಚೆಗೆ ಕುಡಿಯುವ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಪರ್ಯಾಯ ಜಲಮೂಲಗಳನ್ನು ಬಳಸಿ ಶುದ್ಧ ನೀರು ಸರಬರಾಜು ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಅಸ್ವಸ್ಥರಾದ ಗ್ರಾಮಸ್ಥರ ಆರೋಗ್ಯದ ಬಗ್ಗೆ ಎಚ್ಚರವಹಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಗ್ರಾಮೀಣ ನೀರು ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವರಿಗೆ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರವೇಜ್‌ ಅವರು ಮಾಹಿತಿ ನೀಡಿ ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜೂನಿಯರ್‌ ಎಂಜನಿಯರ್‌ ರಾಜ್ಯದ 3000 ಗ್ರಾಮಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆಂದು ಹೇಳಿದರು. ಗ್ರಾಮೀಣ ನೀರು ಸರಬರಾಜು ಇಲಾಖೆಯ ಆಯುಕ್ತರಾದ ಕೆ.ನಾಗೇಂದ್ರಪ್ರಸಾದ್‌ ಚರ್ಚೆಯಲ್ಲಿ ಪಾಲ್ಗೊಂಡರು.

ಚಿಕ್ಕಬಳ್ಳಾಪುರ : ಅನೈತಿಕ ಸಂಬಂಧ ಆರೋಪ : ಪತ್ನಿಯನ್ನು ಮಚ್ಚಿನಿಂದ ಭೀಕರವಾಗಿ ಹತ್ಯೆಗೈದ ಪತಿ

BIG NEWS: ರಾಜ್ಯದಲ್ಲಿ ನಿನ್ನೆಯವರೆಗೆ 5,374 ಡೆಂಗ್ಯೂ ಕೇಸ್ ದಾಖಲು, ಐವರು ಸಾವು: ಸಿಎಂ ಸಿದ್ಧರಾಮಯ್ಯ

Share.
Exit mobile version