ಶೋಪಿಯಾನ್ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮುಂಜ್ ಮಾರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (LeT) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭಯೋತ್ಪಾದಕರನ್ನ ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
“ನಿಷೇಧಿತ ಉಗ್ರ ಎಲ್ಇಟಿ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ 03 ಉಗ್ರರನ್ನ ಹತ್ಯೆ ಮಾಡಲಾಗಿದ್ದು, ಗುರುತು ಪತ್ತೆ ಹಚ್ಚಲಾಗುತ್ತಿದೆ. ಹೆಚ್ಚಿನ ವಿವರಗಳನ್ನ ತಿಳಿಸಲಾಗುವುದು” ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಸೇನೆ ಮತ್ತು ಪೊಲೀಸ್ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಕನಿಷ್ಠ ಮೂವರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ ಎನ್ನಲಾಗ್ತಿದೆ.
BIGG NEWS : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಅಕ್ರಮ ತಡೆಗೆ `ಮೇರಾ ರೇಷನ್’ ಆ್ಯಪ್ ಅಭಿವೃದ್ಧಿ
ಆಭರಣ ಪ್ರಿಯರ ಮುಖದಲ್ಲಿ ಮಂದಹಾಸ ; ಸತತ 4ನೇ ದಿನವೂ ಚಿನ್ನದ ಬೆಲೆ ಭಾರೀ ಇಳಿಕೆ