ಬೆಂಗಳೂರು: ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ತಾಂತ್ರಿಕ ಸಾಧ್ಯತೆ ಇರುವ ವಿದ್ಯುತ್ ಉಪ ಕೇಂದ್ರಳಿಂದ ಹಗಲಿನ ವೇಳೆಯಲ್ಲಿಯೇ ನಿರಂತರ 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ ನ್ನು ಸರಬರಾಜು ಮಾಡಲಾಗುತ್ತಿದೆ. ತಾಂತ್ರಿಕ ಸಾಧ್ಯತೆ ಇಲ್ಲದಿರುವ ವಿದ್ಯುತ್ ಉಪ ಕೇಂದ್ರಗಳಿಂದ ಪಾಳಿಯಲ್ಲಿ ಹಗಲಿನ ವೇಳೆಯಲ್ಲಿ 4 ಗಂಟೆಗಳ ಕಾಲ ಹಾಗೂ ರಾತ್ರಿಯ ವೇಳೆಯಲ್ಲಿ 3 ಗಂಟೆಗಳ ಕಾಲ ಒಟ್ಟು 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ತನ್ನು ಸರಬರಾಜು ಮಾಡಲಾಗುತ್ತಿದೆ. ಅರಣ್ಯ ಪ್ರದೇಶದ ಮೂಲಕ ಹಾದುಹೋಗುವ ಕೃಷಿ ಫೀಡರ್ ಗಳಿಗೆ ಹಗಲಿನ ವೇಳೆಯಲ್ಲಿಯೇ 7 ಗಂಟೆಗಳ ಕಾಲ ನಿರಂತರವಾಗಿ 3 ಪೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆÉ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ವಿಧಾನಸಭೆಯ ಕಲಾಪದ ಪ್ರಶ್ನೋತ್ತರ ವೇಳೆಯಲ್ಲಿ ಚಿಕ್ಕನಾಯಕನಹಳ್ಳಿ ಕ್ಷೇತ್ರದ ಶಾಸಕರಾದ ಸುರೇಶ್ ಕುಮಾರ್ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಫಾರ್ಮ್ ಹೌಸ್ ಗಳನ್ನು ಹೊಂದಿರುವ ಎಲ್ಲಾ ಕೃಷಿ ಪೀಡರ್ ಗಳಿಗೆ ಒಎಲ್‍ಪಿ-ರಿಲೇಗಳ್ನು ಬಳಸಿಕೊಂಡು ಸಂಜೆ 6 ರಿಂದ ಬೆಳಿಗ್ಗೆ 6 ರವರೆಗೆ ಸಿಂಗಲ್ ಫೇಸ್ ವಿದ್ಯುತ್ ಸರಬರಾಜು ವ್ಯವಸ್ಥೆ ಮಾಡುವಂತೆ ವಿದ್ಯುತ್ ಸರಬರಾಜು ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ. ಫಾರ್ಮ್ ಹೌಸ್ ಗಳ ಅಗತ್ಯಕ್ಕೆ ತಕ್ಕಂತೆ ಮತ್ತು ಸಾಕಷ್ಟು ವಿದ್ಯುತ್ ಅಗತ್ಯವನ್ನು ಪೂರೈಸುವ ದೃಷ್ಟಿಯಿಂದ ಮತ್ತ ಫಾರ್ಮ್ ಹೌಸ್‍ಗಳ ಸಂಖ್ಯೆ ಹಾಗೂ ಮಂಜೂರಾದ ಲೋಡ್‍ಗಳನ್ನು ಗಮನದಲ್ಲಿಟ್ಟುಕೊಂಡು ಒಎಲ್‍ಪಿ- ರಿಲೇಗಳಲ್ಲಿ ಗರಿಷ್ಠ ವಿದ್ಯುತ್ 10 ಎಎಂಪಿಎಸ್ ಸೆಟ್ಟಿಂಗ್ ಮಾಡಲಾಗಿದೆ ಹಾಗೂ ಎಲ್ಲೆಲ್ಲಿ ಫಾರ್ಮ್ ಹೌಸ್ ಗಳ ಸಂಖ್ಯೆ ಮತ್ತು ಮಂಜೂರಾದ ಲೋಡ್ ಹೆಚ್ಚಿರುತ್ತದೆಯೋ ಅಂತಹ ಕೃಷಿ ಫೀಡರ್ ಗಳಲ್ಲಿ ವಿದ್ಯುತ್ ಮಿತಿಯನ್ನು 10 ಎಎಂಪಿಎಸ್ ನಿಂದ 20 ಎಎಂಪಿಎಸ್ ಗೆ ಹೆಚ್ಚಿಸಲಾಗಿದೆ ಎಂದರು.
ಪಂಪ್ ಸೆಟ್‍ಗಾಗಿ 4.50 ಲಕ್ಷ ಅರ್ಜಿಗಳು ಸ್ವೀಕಾರವಾಗಿದ್ದು ಅದರಲ್ಲಿ ಈಗಾಗಲೇ 2.50 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಹಂತ ಹಂತವಾಗಿ ಅರ್ಜಿಗಳನ್ನು ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು. ರೈತರು ವಿದ್ಯುತ್ ಗೆ ಸಂಬಂಧಿಸಿದಂತೆ ಟೋಲ್ ಪ್ರೀ ನಂಬರ್ 1912 ಗೆ ರೈತರ ಕರೆ ಮಾಡಿ ದೂರು ನೀಡಬಹುದಾಗಿದೆ. ಕರೆಯು ರೆಕಾರ್ಡ್ ಆಗುವುದರಿಂದ ಸಮಸ್ಯೆಗೆ ಶೀಘ್ರವಾಗಿ ಪರಿಹಾರ ದೊರಕಲಿದೆ. ದೂರು ನೀಡಿದ್ದಲ್ಲಿ ತಕ್ಷಣವೇ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
Good News: ರಾಜ್ಯದ ‘ಆಯುಷ್ ವೈದ್ಯ’ರಿಗೆ ಸಿಹಿಸುದ್ದಿ: ಅಲೋಪತಿ ವೈದ್ಯಾಧಿಕಾರಿಗಳಿಗೆ ಸರಿಸಮನಾಗಿ ‘ವೇತನ’ ಪಾವತಿ
ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ