ಪಾಲ್ಘರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸರ್ ಪಟ್ಟಣದ ತಾರಾಪುರ್ ಎಂಐಡಿಸಿಯಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಜವಳಿ ಉದ್ಯಮದಲ್ಲಿ ಬಳಸುವ ಗಾಮಾ ಆಮ್ಲವನ್ನು ಉತ್ಪಾದಿಸುವ ಘಟಕದಲ್ಲಿ ಸಂಜೆ 4.20 ಕ್ಕೆ ಈ ಘಟನೆ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಸ್ಥಾವರದ ಮೇಲ್ಛಾವಣಿ ಕಿತ್ತು ಹೋಗಿದೆ. ರಾಸಾಯನಿಕ ಕಾರ್ಖಾನೆಯಲ್ಲಿನ ಸ್ಫೋಟದಿಂದಾಗಿ, ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಲ್ಘರ್ ಪೊಲೀಸ್ ವಕ್ತಾರ ಸಚಿನ್ ನಾವಡ್ಕರ್ ಹೇಳಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಬೋಯಿಸರ್ ಠಾಣೆಯ ಸಿಬ್ಬಂದಿ ಹಾಗೂ ಸ್ಥಳೀಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಸ್ಫೋಟ ಸಂಭವಿಸಿದಾಗ ಕಾರ್ಖಾನೆಯಲ್ಲಿ ಒಟ್ಟು 18 ಉದ್ಯೋಗಿಗಳು ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
BIG NEWS : ಭಾರತದಲ್ಲಿ ಉಷ್ಣ ಸಂಬಂಧಿ ಸಾವಿನ ಸಂಖ್ಯೆ 55% ಹೆಚ್ಚಳ: ಲ್ಯಾನ್ಸೆಟ್ ಅಧ್ಯಯನ
BIG NEWS : ʻಗುಜರಾತ್ʼ ಅನ್ನು 100 % ‘ಹರ್ ಘರ್ ಜಲ್’ ರಾಜ್ಯ ಎಂದು ಘೋಷಣೆ | Har Ghar Jal