ಉತ್ತರ ಪ್ರದೇಶ: ಪ್ರಯಾಗ್ ರಾಜ್ ಕಾಲ್ತುಳಿತದಲ್ಲಿ 30 ಭಕ್ತರು ಮೃತಪಟ್ಟಿದ್ದಾರೆ. ಅಲ್ಲದೇ 60 ಭಕ್ತರು ಗಾಯಗೊಂಡಿದ್ದಾರೆ ಎಂಬುದಾಗಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಡಿಐಜಿ ವೈಭವ್ ಕೃಷ್ಣ ಖಚಿತ ಮಾಹಿತಿಯನ್ನು ನೀಡಿದ್ದಾರೆ.
ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಸಂದರ್ಭದಲ್ಲಿ ಸಂಗಮದಲ್ಲಿ ಕಾಲ್ತುಳಿತದಂತಹ ಘಟನೆ ಸಂಭವಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಪ್ರಧಾನಿ ಮೋದಿ, ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುವಲ್ಲಿ ತೊಡಗಿದೆ ಎಂದು ಹೇಳಿದರು.
ಇಂದು ಮುಂಜಾನೆ ಸಂಭವಿಸಿದ ಮಹಾಕುಂಭ ಕಾಲ್ತುಳಿತದಲ್ಲಿ ಮೂವತ್ತು ಜನರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. 25 ಜನರನ್ನು ಗುರುತಿಸಲಾಗಿದ್ದು, ಐವರನ್ನು ಗುರುತಿಸಲಾಗುತ್ತಿದೆ ಎಂದು ಮಹಾಕುಂಭದ ಡಿಐಜಿ ವೈಭವ್ ಕೃಷ್ಣ ಖಚಿತಪಡಿಸಿದ್ದಾರೆ.
ಪ್ರಯಾಣಿಕರ ಗಮನಕ್ಕೆ: ಬೆಳಗಾವಿ-ಮೀರಜ್ ನಡುವೆ ಕಾಯ್ದಿರಿಸದ ವಿಶೇಷ ರೈಲುಗಳ ವಿಸ್ತರಣೆ
ದೆಹಲಿಯಲ್ಲಿ ಎಎಪಿ-ಕಾಂಗ್ರೆಸ್ ಚುನಾವಣೋತ್ತರ ಮೈತ್ರಿ ಸಾಧ್ಯತೆ : ಮೋದಿ ಎಚ್ಚರಿಕೆ