ಬೆಂಗಳೂರು : ಒಂದೆಡೆ ಹೊಸ ವರ್ಷಾಚರಣೆಗೆ ಕೌಂಟ್ಡೌನ್ ಆರಂಭ ಇನ್ನೊಂದೆಡೆ ಕೊರೊನಾ ಹೊಸ ತಳಿ ಬಿಎಫ್.7 ಆತಂಕ ನಡುವೆ ” ಡಿ.31ರ ರಾತ್ರಿ 12 ರವರೆಗೆ ‘ಲೌಡ್ ಸ್ಪೀಕರ್ ಬಳಕೆಗೆ ಅವಕಾಶ ಎಂದು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೊಸ ತಳಿ ಬಿಎಫ್.7 ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಹರಡುವ ಭೀತಿ ಶುರುವಾಗಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕಾಗಿ ಫುಲ್ ಅಲರ್ಟ್ ಆಗಿದೆ. ಈ ನಿಟ್ಟಿನಲ್ಲಿ ಪಬ್ ಬಾರ್ ರೆಸ್ಟೋರೆಂಟ್ಗಳ ಮಾಲೀಕರು ನಿಯಮ ಪಾಲಿಸಬೇಕು. ಮಧ್ಯರಾತ್ರಿ 1 ಗಂಟೆವರೆಗೆ ಮಾತ್ರ ಪಾರ್ಟಿ ನಡೆಸಬೇಕು ಡಿ.31ರ ರಾತ್ರಿ 12 ರವರೆಗೆ ಲೌಡ್ ಸ್ಪೀಕರ್ ಬಳಕೆಗೆ ಅವಕಾಶ ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ವಿಶೇಷ ನಿಗಾ ಇಡಲಾಗಿದೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿಕೆ ನೀಡುದ್ದಾರೆ.
ಇನ್ನೂ ಹೊಸವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಅಪಘಾತದಂತ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ನಗರದ ಪ್ರಮುಖ ರಸ್ತೆಗಳಲ್ಲಿನ 30 ಫ್ಲೈ ಓವರ್ ಗಳನ್ನು ಮುಚ್ಚಲಾಗಿದೆ. ವಾಹನ ಸವಾರರು ಫ್ಲೈ ಓವರ್ ಬಿಟ್ಟು, ಸರ್ವಿಸ್ ರಸ್ತೆಯಲ್ಲಿ ತೆರಳುವಂತೆಯೂ ಕ್ರಮವನ್ನು ಕೈಗೊಳ್ಳಲಾಗಿದೆ.