ನವದೆಹಲಿ: ದೇಶದಲ್ಲಿ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದರು.
ಮುಂದಿನ ಐದು ವರ್ಷಗಳಲ್ಲಿ 3 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ. ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸುತ್ತೇವೆ ಎಂದು ತಿಳಿಸಿದರು.