ಶಿವಮೊಗ್ಗ : ರಾಜ್ಯದಲ್ಲಿ ಶೀಘ್ರವೇ 3,000 ಕೆಪಿಎಸ್ ಶಾಲೆಗಳನ್ನು ಕೂಡಾ ತೆರೆಯಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಿಚವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ ಆಧುನಿಕ ಸೌಲಭ್ಯಗಳೊಂದಿಗೆ 3,000 ಕೆಪಿಎಸ್ ಶಾಲೆಗಳನ್ನು ಕೂಡಾ ತೆರೆಯಲು ಉದ್ದೇಶಿಸಲಾಗಿದೆ.ಸರ್ಕಾರಿ ಶಾಲೆಯ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ನೀಡುವ ಸಲುವಾಗಿ ಅಜೀಂ ಪ್ರೇಂಜಿ ಫೌಂಡೇಶನ್ ನೆರವಿನೊಂದಿಗೆ ಶೀಘ್ರದಲ್ಲೇ ವಾರದಲ್ಲಿ ಆರು ದಿನ ಮೊಟ್ಟೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಸ್ತುತ ಮಕ್ಕಳಿಗೆ ವಾರಕ್ಕೆ 2 ದಿನ ಮೊಟ್ಟೆ ನೀಡಲಾಗುತ್ತಿದೆ. 6 ದಿನ ನೀಡುವುದರಿಂದ ವಾರ್ಷಿಕ 1,400 ಕೋಟಿ ರು. ವೆಚ್ಚವಾಗಲಿದೆ ಎಂದರು . ಸರ್ಕಾರಿ ಶಾಲೆಯ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಂತ, ಹಂತವಾಗಿ ಶಿಕ್ಷಕರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.