ಬೆಂಗಳೂರು : ಸಕಾಲದಲ್ಲಿ ಮಳೆ ಬಾರದೆ ಇರುವುದರಿಂದ ರಾಜ್ಯವು ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದು, ಅಲ್ಲದೆ ರೈತರು ಕೂಡ ತುಂಬಾ ಕಷ್ಟವನ್ನು ಎದುರಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ನೀರಾವರಿ ವಿಚಾರಗಳ ಬಗ್ಗೆ ಅಧ್ಯಯನ ನಡೆಸಲು ಕೇಂದ್ರದಿಂದ 31 ಮಂದಿ ಸಂಸದರ ತಂಡ ಸೋಮವಾರ ರಾಜ್ಯಕ್ಕೆಆಗಮಿಸಲಿದೆ ಎಂದುಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ತಂಡದ ಮುಂದೆ ನಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲಾಗುವುದು ಎಂದು ತಿಳಿಸಿದರು.ಸಂಸದರ ಅಧ್ಯಯನ ತಂಡಕ್ಕೆ ನಮ್ಮ ನೀರಾವರಿ ಸಮಸ್ಯೆ ಬಗ್ಗೆ ಅರ್ಥ ಮಾಡಿಸಲಾಗುವುದು ಎಂದು ಅವರು ತಿಳಿಸಿದರು.
ನದಿ ಜೋಡಣೆ ಎಂಬುದು ಕೇಂದ್ರ ಸರ್ಕಾರದ ಯೋಜನೆ. ಇದೊಂದು ದೊಡ್ಡ ಯೋಜನೆಯಾಗಿದ್ದು, ಕೇಂದ್ರವು ಈಗಾಗಲೇ ಹಲವು ಹಂತದ ಸಭೆಗಳನ್ನು ಮಾಡಿದೆ. ಈ ಬಗ್ಗೆ ಮಾತನಾಡಿ ನಾವು ವಿಷಯಾಂತರ ಮಾಡುವುದು ಬೇಡ. ಸೋಮವಾರ ಹಾಗೂ ಮಂ ಗಳವಾರ ಕೇಂದ್ರದ 31 ಸಂಸದರ ತಂಡ ಕಾವೇರಿ ವೀಕ್ಷಣೆಗೆ ಬರುತ್ತಿದೆ. ಕಾವೇರಿ ವೀಕ್ಷಣೆ ಜತೆ ನಮ್ಮ ಜಲಸಂಪನ್ಮೂಲಗಳ ಬಗ್ಗೆ ಚರ್ಚಿಸಲಿದೆ. ಈ ವೇಳೆ ನಮ್ಮ ನೀರಾವರಿ ಸಮಸ್ಯೆ ಬಗ್ಗೆ ಗಮನಕ್ಕೆ ತರಲಾಗುವುದು ಎಂದು ಹೇಳಿದರು.