ಬೆಂಗಳೂರು: ನಗರದಲ್ಲಿ ಡೆಂಗ್ಯೂ ಆರ್ಭಟಿಸಿದೆ. ಇಂದು ಆರೋಗ್ಯ ಇಲಾಖೆ ನಡೆಸಿದಂತ ಪರೀಕ್ಷೆಯಲ್ಲಿ ಬರೋಬ್ಬರಿ 31 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಬೆಂಗಳೂರಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು ಆರೋಗ್ಯ ಇಲಾಖೆಯಿಂದ 300 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 18 ಜನರಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯ ವರದಿಯಿಂದ ತಿಳಿದು ಬಂದಿದೆ.

ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಬರೋಬ್ಬರಿ 31 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಹೀಗಾಗಿ ಬೆಂಗಳೂರಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 1,564ಕ್ಕೆ ಏರಿಕೆಯಾದಂತೆ ಆಗಿದೆ.

UPDATE: ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

‘ರೈತ’ರಿಗೆ ಬಹುಮುಖ್ಯ ಮಾಹಿತಿ: ಹವಾಮಾನ ಆಧಾರಿತ ‘ಬೆಳೆ ವಿಮೆ ನೋಂದಣಿ’ಗೆ ಅರ್ಜಿ ಆಹ್ವಾನ

Share.
Exit mobile version