ಕೋಲಾರ : ಹಾಸ್ಟೆಲ್ ನಲ್ಲಿ ಹಲ್ಲಿ ಬಿದ್ದಿದ್ದ ಆಹಾರ ಸೇವಿಸಿ 34 ಮಂದಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕೋಲಾರ (Kolara) ತಾಲೂಕು ದೊಡ್ಡಹಸಾಳ ಗ್ರಾಮದ ಬಳಿ ಇರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ನಲ್ಲಿ ನಡೆದಿದೆ.
40 ಜನ ವಿದ್ಯಾರ್ಥಿಗಳಿರುವ ಹಾಸ್ಟೆಲ್ನಲ್ಲಿ ಸುಮಾರು 34 ಜನ ವಿದ್ಯಾರ್ಥಿಗಳು ತಿಂಡಿ ತಿಂದಿದ್ದರು. ನಂತರ ತಿಂಡಿಯಲ್ಲಿ ಹಲ್ಲಿ ಬಿದ್ದಿರುವುದು ಗೊತ್ತಾಗಿದೆ. ಅಷ್ಟೊತ್ತಿಗಾಗಲೇ ಪರೀಕ್ಷೆ ಬರೆಯಲು ಹೋಗಿದ್ದ ಕೆಲವು ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡು ಸುಸ್ತಾಗಿದ್ದು, ಕೂಡಲೇ ವಿದ್ಯಾರ್ಥಿಗಳನ್ನು ಕೋಲಾರ ಜಿಲ್ಲಾಸ್ಪತ್ರೆ ಗೆ ದಾಖಲಿಸಲಾಗಿದೆ.
ಸದ್ಯ 34 ಜನ ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆಯಲ್ಲಿ ಬಂದು ಚಿಕಿತ್ಸೆ ಪಡೆಯುತ್ತಿದ್ದು ಯಾರಿಗೂ ಏನೂ ಅಪಾಯವಿಲ್ಲ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ.ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಸ್ಪತ್ರೆಗೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕದ ಜನತೆಗೆ ಸಿಹಿ ಸುದ್ದಿ: ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ, ಇಲ್ಲಿದೆ ವೇಳಾಪಟ್ಟಿ
Headache ; ತಲೆನೋವಿನಲ್ಲಿಎಷ್ಟು ವಿಧ.? ಕಾರಣವೇನು.? ನಿವಾರಸೋ ಬಗೆ ಹೇಗೆ.? ಇಲ್ಲಿದೆ ಮುಖ್ಯ ಮಾಹಿತಿ