ಡಿಂಡೋರಿ( ಮಧ್ಯಪ್ರದೇಶ): ಎಮ್ಮೆಗಳ ಹಿಂಡು ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಪಲ್ಟಿಯಾಗಿ 34 ಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಅದರಲ್ಲಿ 10 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಘಟನೆ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ನಡೆದಿದೆ.
ಬಸ್ ಪ್ರಯಾಣಿಕರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ರಾಘೋಪುರ ಸಕ್ಕಾ ಗ್ರಾಮದಿಂದ ಸಕುಲ್ಪುರಕ್ಕೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಭೂಪೇಂದ್ರ ಪಾಂಡ್ರೆ ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಬಸ್ ಅನ್ನು ಅತಿವೇಗದಲ್ಲಿ ಚಲಾಯಿಸಿದ ಪರಿಣಾಮ ಅವಘಡ ಸಂಭವಿಸಿದೆ ಎನ್ನಲಾಗುತ್ತಿದೆ.
ಜಿಲ್ಲಾ ಕೇಂದ್ರದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಸಾಲಿಯಾ ಪ್ರದೇಶದಲ್ಲಿ ಎಮ್ಮೆಗಳು ಬಸ್ ಮುಂದೆ ಬಂದಾಗ, ಅವುಗಳನ್ನು ಉಳಿಸುವ ಪ್ರಯತ್ನದಲ್ಲಿ ಚಾಲಕ ನಿಯಂತ್ರಣ ಕಳೆದುಕೊಂಡನು. ನಂತರ ವಾಹನವು ಕರುವಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಪಾಂಡ್ರೆ ಹೇಳಿದರು.
SHOCKING NEWS: ‘BMTCಯ ಬಹುತೇಕ ಸಿಬ್ಬಂದಿಗಳಿಗೆ ಹೃದಯ ಸಮಸ್ಯೆ- ಜಯದೇವ ಹೃದ್ರೋಗ ಆಸ್ಪತ್ರೆ ವರದಿ