ಬೆಂಗಳೂರು: ರಾಜ್ಯಾಧ್ಯಂತ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದೆ. ಕಳೆದ 24 ಗಂಟೆಯಲ್ಲಿ ರಾಜ್ಯಾಧ್ಯಂತ 381 ಮಂದಿಗೆ ಡೆಂಗ್ಯೂ ಪಾಸಿಟಿವ್ ಅಂತ ತಿಳಿದು ಬಂದಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 2503 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 381 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ದೃಢಪಟ್ಟಿದೆ ಎಂದು ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 171, ಚಿಕ್ಕಬಳ್ಳಾಪುರ 2, ತುಮಕೂರು 17, ಚಿತ್ರದುರ್ಗ 20, ದಾವಣಗೆರೆ 16, ವಿಜಯಪುರ 10, ಉತ್ತರಕನ್ನಡ 1, ಬೀದರ್ 9, ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ತಲಾ ನಾಲ್ವರಿಗೆ ಡೆಂಗ್ಯೂ ದೃಢಪಟ್ಟಿದೆ. ಮಂಡ್ಯದಲ್ಲಿ 18, ಹಾಸನ 38, ಉಡುಪಿ 5, ಚಿಕ್ಕಮಗಳೂರು 12 ಸೇರಿದಂತೆ ಇಂದು 381 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ಪರೀಕ್ಷೆಯಲ್ಲಿ ತಿಳಿದು ಬಂದಿದೆ ಅಂತ ತಿಳಿಸಿದೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳೇ ಗಮನಿಸಿ: 10,000 ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ