ಬೆಂಗಳೂರು: ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯನ್ನು ಡಿಸೆಂಬರ್ 29ಕ್ಕೆ ನಿಗದಿ ಮಾಡಿ, ಕರ್ನಾಟಕ ಲೋಕಸಭಾ ಆಯೋಗವು (ಕೆಪಿಎಸ್‌ಸಿ) ಮಂಗಳವಾರ ಅಧಿಸೂಚನೆ ಹೊರಡಿಸಿದೆ.
ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯನ್ನು ಡಿಸೆಂಬರ್ 29ಕ್ಕೆ ನಿಗದಿ ಮಾಡಿ, ಕರ್ನಾಟಕ ಲೋಕಸಭಾ ಆಯೋಗವು (ಕೆಪಿಎಸ್‌ಸಿ) ಮಂಗಳವಾರ ಅಧಿಸೂಚನೆ ಹೊರಡಿಸಿದೆ.#kpsc_re_exam @CMofKarnataka @siddaramaiah pic.twitter.com/rDEdp9X9tV
— DIPR Karnataka (@KarnatakaVarthe) October 2, 2024
ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ಮಾಹಿತಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಮತ್ತು ತಿದ್ದುಪಡಿ ಅಧಿಸೂಚನೆಗಳನ್ನು ಕ್ರಮವಾಗಿ 26-02-2024, 02-04-2024, 19-04-2024 ಮತ್ತು 06-07-2024ರಂದು ಹೊರಡಿಸಲಾಗಿರುತ್ತದೆ, ಸದರಿ ಹುದ್ದೆಗಳಿಗೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿನಾಂಕ:29-12-2024ರಂದು ನಡೆಸಲು ನಿಗದಿಪಡಿಸಲಾಗಿರುತ್ತದೆ ಎಂದಿದ್ದಾರೆ.
ಮುಂದುವರೆಸುತ್ತಾ, ಸದರಿ ದಿನಾಂಕದಂದು ಯಾವುದೇ ಪರೀಕ್ಷೆಯು ನಿಗದಿಯಾಗದಿರುವ ಕುರಿತು ಪರಿಶೀಲಿಸಲಾಗಿರುತ್ತದೆ. ಆದರೆ ಸದರಿ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ ಪರೀಕ್ಷೆ ನಿಗದಿಯಾದಲಿ, ಅದಕ್ಕೆ ಆಯೋಗವು ಹೊಣೆಯಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು
ಮುಂದೂಡಲಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ