ಬೆಂಗಳೂರು: 384 ಕೆಎಎಸ್ ಅಧಿಕಾರಿಗಳ ಹುದ್ದೆ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆಗೆ ಡೇಟ್ ಫೀಕ್ಸ್ ಮಾಡಲಾಗಿದೆ. ಡಿ.29, 2024ರಂದು ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ.
2023-24ನೇ ಸಾಲಿನ ಗೆಜ಼ೆಟೆಡ್ ಪ್ರೊಬೆಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿ:29.12.2024ರಂದು ನಡೆಸಲು ನಿಗದಿಪಡಿಸಿ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸದರಿ ಪರೀಕ್ಷೆಗೆ ಎಲ್ಲಾ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ಕೆಪಿಎಸ್ಸಿ ತಿಳಿಸಿದೆ.
2023-24ನೇ ಸಾಲಿನ ಗೆಜ಼ೆಟೆಡ್ ಪ್ರೊಬೆಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿ:29.12.2024ರಂದು ನಡೆಸಲು ನಿಗದಿಪಡಿಸಿ ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಸದರಿ ಪರೀಕ್ಷೆಗೆ ಎಲ್ಲಾ ಅಭ್ಯರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿರುತ್ತದೆ.
— Secretary KPSC (@secretarykpsc) October 1, 2024
ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ
ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಪ್ಪು ಬಣ್ಣದ ಬಾಲ್ ಪಾಯಿಂಟ್ ಪೆನ್ನನ್ನು ತರತಕ್ಕದ್ದು. ಅಭ್ಯರ್ಥಿಗಳು ತುಂಬು ತೋಳಿನ ಶರ್ಟ್/ T.Shirt/ Frills/ ಪದರಗಳುಳ್ಳ (layered) ವಿವಿಧ ರೀತಿಯ ವಿನ್ಯಾಸವುಳ್ಳ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಉಡುಪು ಧರಿಸಿ ಪರೀಕ್ಷೆಗೆ ಹಾಜರಾಗುವುದು.
ಯಾವುದೇ ರೀತಿಯ ಆಭರಣಗಳನ್ನು ಧರಿಸುವಂತಿಲ್ಲ (ಮಂಗಳ ಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ). ಶೂ ಮತ್ತು ಸಾಕ್ಸ್ ಧರಿಸುವುದನ್ನು ನಿಷೇಧಿಸಿದೆ ಹಾಗೂ ಸರಳ ಚಪ್ಪಲಿಗಳನ್ನು ಧರಿಸಿ ಹಾಜರಾಗುವುದು.
ಅಭ್ಯರ್ಥಿಯು ಪ್ರವೇಶ ಪತ್ರವನ್ನು ಹಾಗೂ ಒಂದು ಗುರುತಿನ ಚೀಟಿಯನ್ನು ಹಾಜರುಪಡಿಸದಿದ್ದಲ್ಲಿ ಪರೀಕ್ಷೆಗೆ ಅನುಮತಿಸಲಾಗುವುದಿಲ್ಲ.
— Secretary KPSC (@secretarykpsc) October 1, 2024