Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇ ಅಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

02/05/2026 4:00 PM

GOOD NEWS: ಮೇ.14ಕ್ಕೆ ಭಾರತಕ್ಕೆ ಮುಂಗಾರು ಪ್ರವೇಶ; ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ! Monsoon Rain

02/05/2026 3:53 PM

BREAKING : ಇಂಧನ ದರ ಏರಿಕೆ ಹಿನ್ನೆಲೆ : ಜುಲೈವರೆಗೂ ಅಂತರಾಷ್ಟ್ರೀಯ ಹಾರಾಟ ಕಡಿತಕ್ಕೆ ಏರ್ ಇಂಡಿಯ ನಿರ್ಧಾರ?!

02/05/2026 3:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆಗೆ ಸಜ್ಜು: ಸಚಿವ ದಿನೇಶ್ ಗುಂಡೂರಾವ್
KARNATAKA

ರಾಜ್ಯದಲ್ಲಿ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳು ಕಣ್ಣಿನ ಆರೋಗ್ಯ ಸೇವೆಗೆ ಸಜ್ಜು: ಸಚಿವ ದಿನೇಶ್ ಗುಂಡೂರಾವ್

By kannadanewsnow0901/07/2025 7:51 PM

ಬೆಂಗಳೂರು: ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ರಾಜ್ಯದ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ ನೂತನವಾಗಿ 393 ಆಶಾಕಿರಣ ದೃಷ್ಟಿ ಕೇಂದ್ರಗಳನ್ನ ತೆರೆಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ನೂತನ ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಇದೇ ತಿಂಗಳ 3 ರಂದು ಬುಧವಾರ ಕೇಂದ್ರಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.

ಈ ಮೊದಲು ಆಶಾಲಿರಣ ಯೋಜನೆಯಡಿ ಆಶಾ ಕಾರ್ಯಕರ್ತೆಯರು ಅಭಿಯಾನದ ಮೂಲಕ ಮನೆ ಮನೆಗೆ ತೆರಳಿ ಕಣ್ಣಿನ ತಪಾಸಣೆ ನಡೆಸಿ ಚಿಕಿತ್ಸೆಗೆ ಅನುವಾಗುತ್ತಿದ್ದರು. ನಿಗದಿತ ಸಮಯದಲ್ಲಿ ಅಭಿಯಾನದ ರೀತಿಯಲ್ಲಿ ತಪಾಸಣಾ ಕಾರ್ಯ ನಡೆಯುತ್ತಿತ್ತು. ಇದೀಗ ಸರ್ಕಾರಿ ಆಸ್ಪತ್ರೆಗಳಲ್ಲಿ ಶಾಶ್ವತ ದೃಷ್ಟಿ ಕೇಂದ್ರಗಳನ್ನೇ ಪ್ರಾರಂಭಿಸಲಾಗುತ್ತಿದ್ದು, ನಿರಂತರವಾಗಿ ಕಣ್ಣಿನ ಆರೋಗ್ಯ ಸೇವೆ ಈ ಕೇಂದ್ರಗಳಲ್ಲಿ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಎಲ್ಲ ಜಿಲ್ಲಾ ಆಸ್ಪತ್ರೆಗಳು, ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು ಸೇರಿದಂತೆ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಶಾಶ್ವತ ದೃಷ್ಟಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಈ ಕೇಂದ್ರಗಳಿಗೆ ನೇರವಾಗಿ ಹೋಗಿ ದೃಷ್ಟಿ ತಪಾಸಣೆ ಮಾಡಿಸಿಕೊಳ್ಳಬಹುದಾಗಿರುತ್ತದೆ.
ಆಶಾ ಕಾರ್ಯಕರ್ತೆಯರು ಹಾಗೂ ಸಮುದಾಯ ಆರೋಗ್ಯ ಅಧಿಕಾರಿ (CHO) ರವರ ದಿನನಿತ್ಯದ ಚಟುವಟಿಕೆ ಅಡಿಯಲ್ಲಿ ಮನೆಮನೆಗೆ ಭೇಟಿ ನೀಡಿದಾಗ ಪ್ರಾಥಮಿಕ ದೃಷ್ಟಿ ತಪಾಸಣೆ ಮಾಡಬಹುದಾಗಿರುತ್ತದೆ. ಶಂಕಿತ ಪ್ರಕರಣಗಳು ಕಂಡುಬಂದಲ್ಲಿ ಹೆಚ್ಚಿನ ತಪಾಸಣೆಗೆ ಹತ್ತಿರದ ದೃಷ್ಟಿ ಕೇಂದ್ರಗಳಿಗೆ ಕಳುಹಿಸಿ ಅಗತ್ಯ ಚಿಕಿತ್ಸೆಗೆ ನೆರವಾಗಲಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ (ಬಿಬಿಎಂಪಿ) 11 ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ 5 ಕೇಂದ್ರಗಳು Sight Savers India ರವರ ಸಿಎಸ್‌ಆರ್ ಸಹಭಾಗಿತ್ವದಲ್ಲಿ ಮಾನವ ಸಂಪನ್ಮೂಲ, ಉಪಕರಣಗಳು ಹಾಗೂ ಕನ್ನಡಕಗ ವಿತರಣೆಗಳ ಸೇವೆಗಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗಿದೆ.
OneSight Essilor Luxottica Foundation ಸೇರಿದಂತೆ ಒಟ್ಟು 13 ಅಶಾಕಿರಣ ದೃಷ್ಟಿ ಕೇಂದ್ರಗಳು ವಿವಿಧ ಸಿಎಸ್‌ಆರ್ ಪಾಲುದಾರರ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗಿದೆ.

ಆಶಾಕಿರಣ ಕಾರ್ಯಕ್ರಮದ ಎರಡು ಹಂತಗಳಲ್ಲಿ 8 ಜಿಲ್ಲೆಗಳಲ್ಲಿ ಒಟ್ಟು 1.40 ಕೋಟಿ ಜನರು ಪ್ರಾಥಮಿಕ ನೇತ್ರ ತಪಾಸಣೆ ಒಳಗಾಗಿದ್ದು, ಇವರಲ್ಲಿ 24.50 ಲಕ್ಷ ಜನರಿಗೆ ಹೆಚ್ಚಿನ ನೇತ್ರ ತಪಾಸಣೆಗೆ ಸಂಬಂಧಿಸಿದಂತೆ ತೊಂದರೆಗಳಿರುವುದು ಪತ್ತೆಯಾಗಿ, ಇವರನ್ನು ದ್ವಿತೀಯ ಹಂತದ ನೇತ್ರ ತಪಾಸಣೆಗೆ ಒಳಪಡಿಸಲಾಗಿರುತ್ತದೆ. 4.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಿಸಲಾಗಿದ್ದು ಉಳಿದ ಕನ್ನಡಕಗಳನ್ನು ಆಶಾಕಿರಣ ದೃಷ್ಟಿ ಕೇಂದ್ರಗಳಲ್ಲಿ ಇರಿಸಲಾಗಿದೆ. ಹಾಗು ಒಟ್ಟು 1.05 ಲಕ್ಷ ಜನರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಆಶಾಕಿರಣ ಕಾರ್ಯಕ್ರಮದಲ್ಲಿ ಸಾಧಿಸಿದ ಪ್ರಗತಿ

ಹಂತ-1 (2022-23): ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾವೇರಿ ಮತ್ತು ಕಲಬುರ್ಗಿ
68.21 ಲಕ್ಷ ಜನರ ಪ್ರಾಥಮಿಕ ತಪಾಸಣೆ ನಡೆಸಲಾಗಿರುತ್ತದೆ
10.82 ಲಕ್ಷ ಜನರು ಎರಡನೇ ಹಂತದ ತಪಾಸಣೆಗೆ ಒಳಪಡಿಸಲಾಗಿರುತ್ತದೆ
2.70 ಲಕ್ಷ ಉಚಿತ ಕನ್ನಡಕಗಳ ವಿತರಣೆ ಮಾಡಲಾಗಿರುತ್ತದೆ.
59,842 ಜನರಿಗೆ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಹಂತ-II (2023-24): ಚಿತ್ರದುರ್ಗ, ಮಂಡ್ಯ, ರಾಯಚೂರು ಮತ್ತು ಉತ್ತರ ಕನ್ನಡ
72.15 ಲಕ್ಷ ಜನರ ಪ್ರಾಥಮಿಕ ತಪಾಸಣೆ ನಡೆಸಲಾಗಿರುತ್ತದೆ
13.65 ಲಕ್ಷ ಜನರು ಎರಡನೇ ಹಂತದ ತಪಾಸಣೆಗೆ ಒಳಪಡಿಸಲಾಗಿರುತ್ತದೆ
1.60 ಲಕ್ಷ ಉಚಿತ ಕನ್ನಡಕಗಳ ವಿತರಣೆ ಮಾಡಲಾಗಿರುತ್ತದೆ (ಪುಗತಿಯಲ್ಲಿದೆ).
45,267 ಜನರಿಗೆ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ -ಗ್ರೇಡ್ ದೇವಾಲಯಗಳ ಅಭಿವೃದ್ಧಿ: ಸಚಿವ ರಾಮಲಿಂಗಾರೆಡ್ಡಿ

SHOCKING: ಕರ್ನಾಟಕದಲ್ಲಿ ಐದೂವರೆ ವರ್ಷದಲ್ಲಿ ’82 ಹುಲಿ’ಗಳು ಸಾವು

Share. Facebook Twitter LinkedIn WhatsApp Email

Related Posts

ಮೇ ಅಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

02/05/2026 4:00 PM1 Min Read

BIG NEWS : ಹೊಸ ಪಡಿತರ ಚೀಟಿಗಾಗಿ ಅರ್ಜಿ ಕರೆಯದ ಹಿನ್ನೆಲೆ : ರಾಜ್ಯದಲ್ಲಿ 7.76 ಲಕ್ಷ ನಕಲಿ BPL ಕಾರ್ಡ್‌ ಪತ್ತೆ!

02/05/2026 3:38 PM2 Mins Read

ಬೆಂಗಳೂರಲ್ಲಿ ಅರೆಬೆಂದ ಸ್ಥಿತಿಯಲ್ಲಿ ವೃದ್ದೆಯ ಶವ ಪತ್ತೆ : ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಶಂಕೆ!

02/05/2026 3:36 PM1 Min Read
Recent News

ಮೇ ಅಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

02/05/2026 4:00 PM

GOOD NEWS: ಮೇ.14ಕ್ಕೆ ಭಾರತಕ್ಕೆ ಮುಂಗಾರು ಪ್ರವೇಶ; ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ! Monsoon Rain

02/05/2026 3:53 PM

BREAKING : ಇಂಧನ ದರ ಏರಿಕೆ ಹಿನ್ನೆಲೆ : ಜುಲೈವರೆಗೂ ಅಂತರಾಷ್ಟ್ರೀಯ ಹಾರಾಟ ಕಡಿತಕ್ಕೆ ಏರ್ ಇಂಡಿಯ ನಿರ್ಧಾರ?!

02/05/2026 3:45 PM

BIG NEWS : ಹೊಸ ಪಡಿತರ ಚೀಟಿಗಾಗಿ ಅರ್ಜಿ ಕರೆಯದ ಹಿನ್ನೆಲೆ : ರಾಜ್ಯದಲ್ಲಿ 7.76 ಲಕ್ಷ ನಕಲಿ BPL ಕಾರ್ಡ್‌ ಪತ್ತೆ!

02/05/2026 3:38 PM
State News
KARNATAKA

ಮೇ ಅಂತ್ಯದವರೆಗೆ ಭಾರಿ ಮಳೆ ಮುನ್ಸೂಚನೆ: ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ

By kannadanewsnow0902/05/2026 4:00 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಸುಡುತ್ತಿರುವ ಬಿಸಿಲಿನಿಂದ ತತ್ತರಿಸಿದ್ದ ಜನತೆಗೆ ವರುಣದೇವ ಕೊನೆಗೂ ತಂಪೆರೆದಿದ್ದಾನೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹವಾಮಾನವು ದಿಢೀರ್ ಬದಲಾಗಿದ್ದು,…

BIG NEWS : ಹೊಸ ಪಡಿತರ ಚೀಟಿಗಾಗಿ ಅರ್ಜಿ ಕರೆಯದ ಹಿನ್ನೆಲೆ : ರಾಜ್ಯದಲ್ಲಿ 7.76 ಲಕ್ಷ ನಕಲಿ BPL ಕಾರ್ಡ್‌ ಪತ್ತೆ!

02/05/2026 3:38 PM

ಬೆಂಗಳೂರಲ್ಲಿ ಅರೆಬೆಂದ ಸ್ಥಿತಿಯಲ್ಲಿ ವೃದ್ದೆಯ ಶವ ಪತ್ತೆ : ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಶಂಕೆ!

02/05/2026 3:36 PM

BREAKING: ಬೆಂಗಳೂರಲ್ಲಿ SSLC ಟಾಪರ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

02/05/2026 3:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.