ಬೆಂಗಳೂರು: ಜೆಡಿಎಸ್ ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳಿಂದ 1691 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಮಾಜಿ ಸಂಸದ ಪ್ರಜ್ವರ್ ರೇವಣ್ಣ ವಿರುದ್ಧ ದಾಖಲಾಗಿದ್ದಂತ 3ನೇ ಅತ್ಯಾಚಾರ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಬರೋಬ್ಬರಿ 1691 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.
ಜಿಲ್ಲಾ ಪಂಚಾಯ್ತಿ ಸದಸ್ಯ ದೂರಿನ ಪ್ರಕರಣದ ಸಂಬಂಧಿಸಿದಂತ ಚಾರ್ಜ್ ಶೀಟ್ ಇದಾಗಿದೆ. ಈ ಚಾರ್ಜ್ ಶೀಟ್ ನಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯ ಸೀರೆಯನ್ನು ಪ್ರಮುಖ ಸಾಕ್ಷಿಯನ್ನಾಗಿ ಎಸ್ಐಟಿ ಅಧಿಕಾರಿಗಳು ಮಾಡಿರುವುದಾಗಿ ತಿಳಿದು ಬಂದಿದೆ.