ನವದೆಹಲಿ: ಬೆಲೆ ಏರಿಕೆ ವಿರೋಧಿಸಿ ಸದನದೊಳಗೆ ಕರಪತ್ರ ಹಿಡಿದು ಪ್ರತಿಭಟನೆ ನಡೆಸಿದ್ದಕ್ಕಾಗಿ ನಾಲ್ವರು ಕಾಂಗ್ರೆಸ್ ಸಂಸದರನ್ನು ಲೋಕಸಭೆಯಿಂದ ಆಗಸ್ಟ್ 12ಕ್ಕೆ ಕೊನೆಗೊಳ್ಳುವ ಸಂಪೂರ್ಣ ಮುಂಗಾರು ಅಧಿವೇಶನಕ್ಕೆ ಅಮಾನತು ಮಾಡಲಾಗಿದೆ.

ಸ್ಪೀಕರ್ ಓಂ ಬಿರ್ಲಾ ಅವರು ಪ್ರತಿಭಟನೆ ನಡೆಸಲು ಬಯಸುವವರು ಸದನದ ಹೊರಗೆ ಭಿತ್ತಿಪತ್ರ ಹಿಡಿದು ಪ್ರತಿಭಟಿಸುವಂತೆ ಎಚ್ಚರಿಕೆ ನೀಡಿದ್ದರು. ಎಚ್ಚರಿಕೆಯ ಹೊರತಾಗಿಯೂ ಕರಪತ್ರ ಹಿಡಿದು ಕಲಾಪಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್ ಶಾಸಕ ಮಾಣಿಕಂ ಟ್ಯಾಗೋರ್, ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಟಿಎನ್ ಪ್ರತಾಪನ್ ಅವರನ್ನು ಅಮಾನತುಗೊಳಿಸಲಾಗಿದೆ.

ಸ್ಪೀಕರ್ ಕ್ರಮದ ನಂತರ ನಾಲ್ವರು ಸಂಸತ್ ಮೈದಾನದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ತೆರಳಿ ಘೋಷಣೆಗಳನ್ನು ಕೂಗಿದರು. ಕೆಲವರನ್ನು ಅಮಾನತು ಮಾಡುವ ಮೂಲಕ ಸರ್ಕಾರ ತನ್ನ ಸಂಸದರನ್ನು ಬೆದರಿಸಲು ಪ್ರಯತ್ನಿಸುತ್ತಿದೆ ನಮ್ಮ ಸಂಸದರು ಜನರ ಮುಖ್ಯವಾದ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.

ಭಾರಿ ಮಳೆಗೆ ಸ್ಮಶಾನ ಜಲಾವೃತ: ರಸ್ತೆ ಬದಿಯಲ್ಲೇ ಮೃತದೇಹಕ್ಕೆ ಅಂತ್ಯಸಂಸ್ಕಾರ ನಡೆಸಿದ ಕುಟುಂಬಸ್ಥರು… ವಿಡಿಯೋ

“ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ, ಹಿಟ್ಟು, ಮಜ್ಜಿಗೆಯಂತಹ ವಸ್ತುಗಳ ಮೇಲೆ ಜಿಎಸ್‌ಟಿ ಹೇರಿಕೆ ಮುಂತಾದ ವಿಷಯಗಳ ಕುರಿತು ಸಂಸದರು ಫಲಕಗಳನ್ನು ಹಿಡಿದಿದ್ದರು. ಈ ವಿಷಯಗಳ ಬಗ್ಗೆ ಚರ್ಚೆಗೆ ಒತ್ತಾಯಿಸಿ ನಾವು ಮುಂದೂಡಿಕೆ ನಿರ್ಣಯ ಮಂಡಿಸಿದ್ದೇವೆ. ಆದರೆ, ಯಾವುದೇ ಚರ್ಚೆ ನಡೆದಿಲ್ಲ” ಎಂದು ಕಾಂಗ್ರೆಸ್ ಉಪನಾಯಕ ಗೌರವ್ ಗೊಗೊಯ್ ಲೋಕಸಭೆಯಲ್ಲಿ ಹೇಳಿದರು.

ಅಸಮಾಧಾನಗೊಂಡ ಲೋಕಸಭಾ ಸ್ಪೀಕರ್ ಅವರು ಮಧ್ಯಾಹ್ನ 3 ಗಂಟೆಯ ನಂತರ ಚರ್ಚೆಗೆ ಸಿದ್ಧರಿದ್ದೇವೆ. ಆದರೆ, ಸದನದೊಳಗೆ ಯಾವುದೇ ಪ್ಲಕಾರ್ಡ್ ಪ್ರತಿಭಟನೆಯನ್ನು ಸಹಿಸುವುದಿಲ್ಲ. ನೀವು ಫಲಕಗಳನ್ನು ಹಿಡಿದು ಪ್ರತಿಭಟಿಸಲು ಬಯಸಿದರೆ, ಅದನ್ನು ಸದನದ ಹೊರಗೆ ಮಾಡಿ. ನಾನು ಚರ್ಚೆಗೆ ಸಿದ್ಧನಿದ್ದೇನೆ. ಆದರೆ, ನನ್ನ ಸಹೃದಯತೆಯನ್ನು ದೌರ್ಬಲ್ಯ ಎಂದು ಭಾವಿಸಬೇಡಿ” ಎಂದು ಸ್ಪೀಕರ್ ಹೇಳಿ ಬಳಿಕ ಕಲಾಪವನ್ನು ಮುಂದೂಡಿದರು.

ಪ್ರತಿಪಕ್ಷಗಳು ಬೆಲೆ ಏರಿಕೆ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಒತ್ತಾಯಿಸುತ್ತಿವೆ ಮತ್ತು ಜುಲೈ 18 ರಂದು ಮುಂಗಾರು ಅಧಿವೇಶನ ಪ್ರಾರಂಭವಾದಾಗಿನಿಂದ ಉಭಯ ಸದನಗಳಲ್ಲಿ ಕಲಾಪಗಳನ್ನು ಸ್ಥಗಿತಗೊಳಿಸಿದೆ.

Commonwealth Games 2022: ʻಕಾಮನ್‌ವೆಲ್ತ್ ಗೇಮ್ಸ್ʼನಲ್ಲಿ ಭಾಗವಹಿಸುವ ಭಾರತೀಯ ಕ್ರೀಡಾಪಟುಗಳ ಪಟ್ಟಿ ಇಲ್ಲಿದೆ…

BIGG NEWS : ಈ ಬಾರಿಯೂ ಗಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಅವಕಾಶವಿಲ್ಲ!

Share.
Exit mobile version