ರಾಜಸ್ಥಾನ: ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಸಾವನ್ನಪ್ಪಿದ್ದು, 16 ಮಂದಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ.
ಜೋಧಪುರದ ಮಗ್ರಾ ಪುಂಜ್ಲಾ ಪ್ರದೇಶದ ವಸತಿ ಕಾಲೋನಿಯಲ್ಲಿ ಸ್ಫೋಟ ಸಂಭವಿಸಿದೆ. ಸಂತ್ರಸ್ತರು ಸಜೀವ ದಹನವಾಗಿದ್ದು, ಅವರ ದೇಹಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ.
ಗಾಯಗೊಂಡ 16 ಮಂದಿಯೂ ತೀವ್ರ ಸುಟ್ಟಗಾಯಗಳಿಂದ ಬಳಲುತ್ತಿದ್ದು, ಗಾಯಾಳುಗಳನ್ನು ಜೋಧ್ಪುರದ ಮಹಾತ್ಮ ಗಾಂಧಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗೆ ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಭೇಟಿ ನೀಡಿದರು.
ಪ್ರಾಥಮಿಕ ತನಿಖೆಯ ಪ್ರಕಾರ, ಅಕ್ರಮವಾಗಿ ಸಿಲಿಂಡರ್ಗಳನ್ನು ಒಂದು ಸಿಲಿಂಡರ್ನಿಂದ ಇನ್ನೊಂದಕ್ಕೆ ವರ್ಗಾಹಿಸುವಾಗ ಸ್ಫೋಟ ಸಂಭವಿಸಿದೆ ಎನ್ನಲಾಗುತ್ತಿದೆ.