ದೆಹಲಿ: ಇಂದು ಬೆಳಗ್ಗೆ ನೋಯ್ಡಾದಲ್ಲಿ ವಸತಿ ಸೊಸೈಟಿಯೊಂದರ ಕಟ್ಟಡದ ಗೋಡೆ ಕುಸಿದ ಪರಿಣಾಮ ನಾಲ್ವರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ನೊಯ್ಡಾದ ಸೆಕ್ಟರ್ 21 ರಲ್ಲಿರುವ ದೊಡ್ಡ ವಸತಿ ಸಂಕೀರ್ಣವಾದ ಜಲ ವಾಯು ವಿಹಾರ್‌ ಬಳಿ ಒಳಚರಂಡಿ ದುರಸ್ತಿ ಕಾಮಗಾರಿಗೋಸ್ಕರ ನೋಯ್ಡಾ ಪ್ರಾಧಿಕಾರ ಗುತ್ತಿಗೆ ನೀಡಿತ್ತು. ಕಾರ್ಮಿಕರು ಇಟ್ಟಿಗೆ ಹೊರತೆಗೆಯುತ್ತಿದ್ದ ವೇಳೆ ದಿಢೀರ್​ ಆಗಿ ಗೋಡೆ ಕುಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ 12 ಕಾರ್ಮಿಕರನ್ನು ಹೊರತೆಗೆಯಲಾಗಿದೆ.

ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಆರಂಭಿಸಲಾಗಿದೆ. ಹಿರಿಯ ಅಧಿಕಾರಿಗಳು ಸೇರಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಘಟನೆ ಬಗ್ಗೆ ತಿಳಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಇನ್ನೂ, ಹಿರಿಯ ಅಧಿಕಾರಿಗಳನ್ನು ತಕ್ಷಣವೇ ಸ್ಥಳಕ್ಕೆ ತಲುಪಿ ಪರಿಹಾರ ಕಾರ್ಯವನ್ನು ಪ್ರಾರಂಭಿಸುವಂತೆ ಸೂಚಿಸಿದ್ದು, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಅವರ ಕಚೇರಿ ಟ್ವೀಟ್ ಮಾಡಿದೆ.

BIG NEWS: ಗಾಳಿಯಲ್ಲಿರುವ ವೈರಸ್‌ಗಳನ್ನು ಕೇವಲ 10 ನಿಮಿಷಗಳಲ್ಲಿ ಪತ್ತೆ ಮಾಡುತ್ತೆ ಈ ಮಾಸ್ಕ್!

BREAKING NEWS : ಕುಮುಟಾದಲ್ಲಿ ಸೂಪರ್ ಮಲ್ಟಿ ಸ್ಪೆಷಾಲಿಸ್ಟ್ ಆಸ್ಪತ್ರೆ ನಿರ್ಮಾಣ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

BIGG NEWS : ಮಕ್ಕಳ ಕಳ್ಳರ ಬಗ್ಗೆ ವದಂತಿ ಹಬ್ಬಿಸಿದರೆ ಕಠಿಣ ಕ್ರಮ : ಉಡುಪಿ ಎಸ್ ಪಿ ಅಕ್ಷಯ್ ಮಚ್ಚಿಂದ್ರ ಎಚ್ಚರಿಕೆ

Share.
Exit mobile version