ಬೆಂಗಳೂರು: ಶಿವಮೊಗ್ಗದ ಸಕ್ರೆ ಬೈಲು ಆನೆ ಶಿಬಿರದಲ್ಲಿದ್ದಂತ ಬಾಲಣ್ಣ, ಸಾಗರ್ ಸೇರಿದಂತೆ ನಾಲ್ಕು ಆನೆಗಳು ಗಾಯಗಳಿಂದ ಬಳಲುತ್ತಿರುವುದು ದೊಡ್ಡ ಸುದ್ದಿಯಾಗಿತ್ತು. ಇದಕ್ಕೆ ಸರಿಯಾದ ಆರೈಕೆ, ಔಷದೋಪಚಾರದ ಕೊರತೆಯೇ ಕಾರಣ ಎಂಬುದಾಗಿ ಹೇಳಲಾಗುತ್ತಿತ್ತು. ಈ ಹಿನ್ನಲೆಯಲ್ಲಿ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ.
ಈ ಕುರಿತಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವಂತ ಅವರು, ಸಕ್ಕರೆ ಬೈಲು ಆನೆ ಶಿಬಿರದಲ್ಲಿರುವ ಬಾಲಣ್ಯ ಎಂಬ 35 ವರ್ಷದ ಆನೆಯನ್ನು ಶಿವಮೊಗ್ಗ ದಸರಾ ಮಹೋತ್ಸವಕ್ಕೆ ಕಳುಹಿಸಲಾಗಿತ್ತು. ಆ ಸಂದರ್ಭದಲ್ಲಿ ಗಾಯಗೊಂಡಿದ್ದ ಆನೆಗೆ ಐ.ವಿ. ಚುಚ್ಚುಮದ್ದು ನೀಡುವ ಸಂದರ್ಭದಲ್ಲಿ, ಆಗಿರುವ ನಿರ್ಲಕ್ಷದಿಂದ ಸೋಂಕು ಆಗಿ ನರಳುತ್ತಿದೆ, ಇದರ ಜೊತೆಗೆ ಶಿಬಿರದಲ್ಲಿರುವ ಸಾಗರ್ ಎಂಬ ಆನೆಯೂ ಸೇರಿದಂತೆ ಒಟ್ಟು 4 ಆನೆಗಳು ಗಾಯದಿಂದ ಬಳಲುತ್ತಿವೆ. ಇಲ್ಲಿ ಪಶುವೈದ್ಯರ ಕೊರತೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ ಎಂದಿದ್ದಾರೆ.
ಈ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಾಜ್ಯದಲ್ಲಿರುವ ಎಲ್ಲ ಆನೆ ಶಿಬಿರಗಳಲ್ಲಿ ಮತ್ತು ಮೃಗಾಲಯಗಳಲ್ಲಿ, ಸಮರ್ಪಿತ ವೈದ್ಯಾಧಿಕಾರಿ ಇರಬೇಕು, ವೈದ್ಯರ ಕೊರತೆ ಇದ್ದರೆ ಗುತ್ತಿಗೆಯ ಆಧಾರದಲ್ಲಿ ಅಥವಾ ನಿಯೋಜನೆಯ ಮೇಲೆ ವೈದ್ಯರನ್ನು ತಕ್ಷಣ ನೇಮಕ ಮಾಡಿಕೊಳ್ಳಬೇಕು ಎಂದು ಈ ಹಿಂದೆ ಹಲವು ಸಭೆಗಳಲ್ಲಿ ತಿಳಿಸಲಾಗಿದೆ. ಈ ಬಗ್ಗೆ ತುರ್ತು ಕ್ರಮ ವಹಿಸಲು ಮತ್ತು ಬಾಲಣ ಆನೆಗೆ ಚುಚ್ಚು ಮದ್ದು ನೀಡುವ ವೇಳೆ ವೈದ್ಯಾಧಿಕಾರಿ, ಅಧಿಕಾರಿ ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯ ಇದ್ದಲಿ, ಅವರ ವಿರುದ್ಧ ಶಿಸ್ತುಕ್ರಮದ ಶಿಫಾರಸಿನೊಂದಿಗೆ 1 ವಾರದೊಳಗೆ ಸಮಗ್ರ ವರದಿಯನ್ನು ಈ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಲು ಸೂಚಿಸಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ವಿಟಮಿನ್ ಬಿ3 ಪೂರಕವು ಚರ್ಮದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು: ಅಧ್ಯಯನ | skin cancer
ಹಾಸನಾಂಬೆ ದರ್ಶನದ ಬಗ್ಗೆ ಈ ಮಹತ್ವದ ಅಪ್ ಡೇಟ್ ಕೊಟ್ಟ ಸಚಿವ ಕೃಷ್ಣಬೈರೇಗೌಡ








