ಕಾಕಿನಾಡ (ಆಂಧ್ರಪ್ರದೇಶ) : ಆಂಧ್ರಪ್ರದೇಶದ ಗಂಡೇಪಲ್ಲಿಯ ಮಲ್ಲೇಪಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಟಾಟಾ ಮ್ಯಾಜಿಕ್ ಆಟೋ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಟಾಟಾ ಆಟೋದಲ್ಲಿದ್ದ 13 ಮಂದಿಯಲ್ಲಿ ಪ್ರಾಣ ಕಳೆದುಕೊಂಡ ನಾಲ್ವರಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮೂವರು ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
SHOCKING NEWS: ಪ್ರಿಯತಮೆಯ ಕತ್ತು ಸೀಳಿ, ಶವದೊಂದಿಗಿನ ವಿಡಿಯೋ ಪೋಸ್ಟ್ ಮಾಡಿದ ವ್ಯಕ್ತಿ
SHOCKING NEWS: ಉತ್ತರ ಪ್ರದೇಶದಲ್ಲಿ ಮಹಿಳೆಯ ರುಂಡವಿಲ್ಲದ, ತುಂಡರಿಸಿದ ದೇಹದ ಭಾಗಗಳು ಬಾವಿಯಲ್ಲಿ ಪತ್ತೆ
SHOCKING NEWS: ಪ್ರಿಯತಮೆಯ ಕತ್ತು ಸೀಳಿ, ಶವದೊಂದಿಗಿನ ವಿಡಿಯೋ ಪೋಸ್ಟ್ ಮಾಡಿದ ವ್ಯಕ್ತಿ