ಚಿಕ್ಕಬಳ್ಳಾಪುರ: ಮುಂದಿನ ಮಾರ್ಚ್ ಒಳಗಾಗಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ಮೆಡಿಕಲ್ ಕಾಲೇಜುಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ) ಹೇಳಿದ್ದಾರೆ.
‘ವಿಕಲಚೇತನ’ರಿಗೆ ಮಹತ್ವದ ಮಾಹಿತಿ: ‘ಇ-ಸ್ಕಾಲರ್ಶಿಪ್’ ಪಡೆಯಲು ಅರ್ಜಿ ಆಹ್ವಾನ
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಾರ್ಚ್ ಒಳಗಾಗಿ ನಾಲ್ಕು ಜಿಲ್ಲೆಯಗಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುತ್ತಿದೆ. ಪಿಪಿಪಿ ಮಾದರಿಯಲ್ಲಿಯೇ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ನಿರ್ಧರಿಸಲಾಗಿದೆ ಎಂದರು.
ಚಿತ್ರದುರ್ಗ, ರಾಮನಗರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ. ದಾವಣೆಗೆರೆ, ವಿಜಯಪುರ, ಉಡುಪಿ, ಬೆಂಗಳೂರು ಗ್ರಾಮಾತಂರ ಸೇರಿ ವಿವಿಧೆಡೆ ಪಿಪಿಪಿ ಮಾದರಿಯಲ್ಲಿಯೇ ಮೆಡಿಕಲ್ ಕಾಲೇಜು ಸ್ಥಾಪಿಸಲಾಗುತ್ತದೆ. ರಾಜ್ಯದ ಕಡು ಬಡವರಿಗೂ ವೈದ್ಯಕೀಯ ಸೇವೆ ಸಿಗಬೇಕು ಎಂಬುದೇ ಇದರ ಉದ್ದೇಶವಾಗಿದೆ ಎಂದು ಹೇಳಿದರು.