ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಆರ್ಭಟ ಮುಂದುವರೆದಿದೆ. ಇಂದು ಹೊಸದಾಗಿ 40 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸಕ್ರೀಯ ಸೋಂಕಿತರ ಸಂಖ್ಯೆ 126ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 344 ಹಾಗೂ ರಾಟ್ ಮೂಲಕ 51 ಸೇರಿದಂತೆ 395 ಜನರನ್ನು ಕೋವಿಡ್ ಪತ್ತೆ ಪರೀಕ್ಷೆಗೆ ಒಳಪಡಿಸಿರುವುದಾಗಿ ತಿಳಿಸಿದೆ.
ಕಳೆದ 24 ಗಂಟೆಯಲ್ಲಿ ಪರೀಕ್ಷೆಗೆ ಒಳಪಡಿಸಲಾದಂತ 395 ಜನರಲ್ಲಿ 40 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಕೋವಿಡ್ ಸೋಂಕಿತರಾದಂತ 14 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನುಳಿದಂತವರು ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದಿದೆ.
ಪ್ಲೇ ಹೋಂ, LKG, UKG ಸೇರಿ ಎಲ್ಲಾ ಪೂರ್ವ ಪ್ರಾಥಮಿಕ ಶಾಲೆಗಳ ನೋಂದಣಿ ಕಡ್ಡಾಯ: ಶಾಲಾ ಶಿಕ್ಷಣ ಇಲಾಖೆ ಆದೇಶ
ನಾಳೆ ಗುಜರಾತ್, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು-ಕಾಶ್ಮೀರದಲ್ಲಿ ಅಣಕು ಕವಾಯತು | Mega security drill