ಚಿಕ್ಕಮಗಳೂರು: 400 ಮೀಟರ್ ಸಿಂಥೆಟಿಕ್ ಟ್ಯ್ರಾಕ್ ಕಾಮಗಾರಿ ಹಾಗೂ ಒಳಾಂಗಣ ಕ್ರೀಡಾಂಗಣದ ಕಾಮಗಾರಿಯನ್ನು 2 ತಿಂಗಳೊಳಗೆ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಗಡುವು ನೀಡಿದರು.
BIGG NEWS: ಬಿಲಾವಲ್ ಭುಟ್ಟೋ ವಿರುದ್ಧ ಬಿಜೆಪಿ ಕಿಡಿ; ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ
ಖೇಲೋ ಇಂಡಿಯಾ ಯೋಜನೆಯಡಿ ಕಲ್ಯಾಣ ನಗರ ಕ್ರೀಡಾಂಗಣದಲ್ಲಿ 4.50 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ, ಖೇಲೋ ಇಂಡಿಯಾ ಯೋಜನೆಯಡಿ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ 7 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಫೆಬ್ರವರಿ ವೇಳೆಗೆ ಪೂರ್ಣಗೊಳಿಸಬೇಕು ಎಂದು ಸಚಿವ ಡಾ.ನಾರಾಯಣಗೌಡ ಅವರು ಸೂಚಿಸಿದರು.
BIGG NEWS: ಬಿಲಾವಲ್ ಭುಟ್ಟೋ ವಿರುದ್ಧ ಬಿಜೆಪಿ ಕಿಡಿ; ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ
ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಈಜುಕೊಳ ನವೀಕರಣ 70 ಲಕ್ಷ, ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಪೆವಿಲಿಯನ್ ನಿರ್ಮಾಣ ಕ್ಕೆ120 ಲಕ್ಷ, ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯ ನಿರ್ಮಾಣಕ್ಕೆ 300 ಲಕ್ಷ, ಅಯ್ಯನಕೆರೆ ಜಲ ಸಾಹಸ ಕ್ರೀಡಾ ಅಭಿವೃದ್ಧಿ ಯೋಜನೆಗೆ 475 ಲಕ್ಷ, ಕಲ್ಯಾಣ ನಗರ ಕ್ರೀಡಾಂಗಣದಲ್ಲಿ ಫುಟ್ಬಾಲ್ ಟರ್ಫ್ ಅಂಕಣ ನಿರ್ಮಾಣಕ್ಕೆ 375 ಲಕ್ಷ ಅನುದಾನ ನೀಡಲಾಗಿದ್ದು, ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟ ಕಾಯ್ದುಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು.
BIGG NEWS: ಬಿಲಾವಲ್ ಭುಟ್ಟೋ ವಿರುದ್ಧ ಬಿಜೆಪಿ ಕಿಡಿ; ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ