ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಬಾಂಬೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

420 ಕೋಟಿ ತೆರಿಗೆ ವಂಚನೆ ಪ್ರಕರಣ ಸಂಬಂಧ ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್ ಅನಿಲ್ ಅಂಬಾನಿ ವಿರುದ್ಧ ನ.17 ರವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಈ ಮೂಲಕ ಅನಿಲ್ ಅಂಬಾನಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ಆದಾಯ ತೆರಿಗೆ ಇಲಾಖೆ ರಿಲಾಯನ್ಸ್ ಸಮೂಹಗಳ ಅಧ್ಯಕ್ಷ ಅನಿಲ್ ಅಂಬಾನಿ ಅವರ ವಿರುದ್ಧ ಕಪ್ಪು ಹಣ ಕಾಯ್ದೆಯಡಿ ಮೊಕದ್ದಮೆ ಹೂಡಲು ನೊಟೀಸ್ ಜಾರಿ ಮಾಡಿತ್ತು.  420 ಕೋಟಿ ರೂಪಾಯಿ ತೆರಿಗೆ ವಂಚನೆ ಹಾಗೂ ಸ್ವಿಸ್ ಬ್ಯಾಂಕ್ ನಲ್ಲಿರುವ 814 ಕೋಟಿಗೂ ಹೆಚ್ಚಿನ ಬಹಿರಂಗಪಡಿಸದ ಹಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಉದ್ದೇಶಪೂರ್ವಕವಾಗಿ ಅಂಬಾನಿ ಅವರು ವಿದೇಶಿ ಬ್ಯಾಂಕ್ ನಲ್ಲಿರುವ ಹಣದ ಬಗ್ಗೆ ಮಾಹಿತಿ ನೀಡಲಿಲ್ಲ ಎಂದು ಐಟಿ ಇಲಾಖೆ ಆರೋಪಿಸಿತ್ತು.

ಮಾಜಿ ಸಿಎಂ ಎಸ್.ಎಂ ಕೃಷ್ಣ ಆರೋಗ್ಯದ ಬಗ್ಗೆ ಸಚಿವ ಡಾ.ಕೆ ಸುಧಾಕರ್ ಮಾಹಿತಿ | SM KRISHNA HEALTH UPDATE

|KARNATAKA WEATHER REPORT : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಮೂರು ದಿನ ಗುಡುಗು ಸಹಿತ ಮಳೆ : ‘ಹವಾಮಾನ ಇಲಾಖೆ’ ಮುನ್ಸೂಚನೆ

Share.
Exit mobile version