ಬೆಂಗಳೂರು: ರಾಜ್ಯದಲ್ಲಿ ಸೆಪ್ಟಂಬರ್ 22ರಿಂದ ಆರಂಭಗೊಳ್ಳುತ್ತಿರುವಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ 420 ಕೋಟಿ ನಿಗದಿ ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025ರ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಾಡಿನ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳುವ ಉದ್ದೇಶದಿಂದ ಮಧುಸೂಧನ ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ಆಯೋಗ ಸಮೀಕ್ಷೆ ಕಾರ್ಯ ಕೈಗೊಳ್ಳಲಿದೆ ಎಂದರು.
ಆದಷ್ಟು ಎಚ್ಚರಿಕೆಯಿಂದ, ಪ್ರತಿಯೊಬ್ಬರನ್ನೂ ಒಳಗೊಂಡಂತೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಡಿಸೆಂಬರ್ ಒಳಗಾಗಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ದಸರಾ ರಜೆ ಅವಧಿಯಲ್ಲಿ ಶಿಕ್ಷಕರ ಸೇವೆಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ ನಡೆಯಲಿದೆ. 1.75 ಲಕ್ಷ ಶಿಕ್ಷಕರನ್ನು ಈ ಕಾರ್ಯಕ್ಕೆ ಬಳಸಲಾಗುವುದು. ಅವರಿಗೆ ರೂ.20 ಸಾವಿರವರೆಗೆ ಗೌರವ ಸಂಭಾವನೆ ನೀಡಲಾಗುವುದು. ಶಿಕ್ಷಕರ ಸಂಭಾವನೆಗೆ ರೂ. 325 ಕೋಟಿ ವೆಚ್ಚವಾಗಲಿದೆ. ತಾತ್ಕಾಲಿಕವಾಗಿ ರೂ.420 ಕೋಟಿ ಸಮೀಕ್ಷೆ ಕಾರ್ಯಕ್ಕೆ ನಿಗದಿಪಡಿಸಲಾಗಿದೆ. ಅಗತ್ಯ ಬಿದ್ದರೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಜಾತಿ ಸಮೀಕ್ಷೆ ಬಗ್ಗೆ ತಂತ್ರಜ್ಞಾನ ಬಳಕೆ ಮೂಲಕ ನಿಖರ ಮಾಹಿತಿ ಸಂಗ್ರಹ: ಸಿಎಂ ಸಿದ್ಧರಾಮಯ್ಯ
ಕೋಲಾರದಲ್ಲಿ ಶಾಲೆಗೆ ಬಾರದ ವಿದ್ಯಾರ್ಥಿಯನ್ನ ಪ್ರಶ್ನಿಸಿದ ಶಿಕ್ಷಕಿಯ ಮೇಲೆ ತಂದೆಯಿಂದ ಹಲ್ಲೆ