ಹಾವೇರಿ : ಬೆಂಗಳೂರು: ಆರೋಗ್ಯ ಸೇವೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದಂತ ರಾಜ್ಯ ಸರ್ಕಾರ ಬಿಬಿಎಂಪಿಯ 243 ವಾರ್ಡ್ ಗಳು ಸೇರಿದಂತೆ ರಾಜ್ಯದ ಒಟ್ಟು 437 ಕಡೆ ಡಿಸೆಂಬರ್ ಕೊನೆಯ ವಾರದಲ್ಲಿ ನಮ್ಮ ಕ್ಲಿನಿಕ್ ( Namma Clinic ) ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು, 96 ಕೋಟಿ ವೆಚ್ಚದ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಉತ್ತಮ ಚಿಕಿತ್ಸೆ ಸಿಗುವ ವಿಶ್ವಾಸವಿದೆ ಎಂದರು.
ಶೀಘ್ರವೇ ರಾಜ್ಯದಲ್ಲಿ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ. ಡಿಸೆಂಬರ್ ಕೊನೆಯ ವಾರದಲ್ಲಿ 437 ನಮ್ಮ ಕ್ಲಿನಿಕ್ ಗಳನ್ನು ರಾಜ್ಯಾಧ್ಯಂತ ಆರಂಭಿಸಲಾಗುತ್ತಿದೆ. ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ಹಾಗೂ ಕನ್ನಡ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.