ಬೆಂಗಳೂರು: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ 480 ಸಮುದಾಯ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದ್ದು 2025ರ ಜನವರಿ ಅಂತ್ಯದೊಳಗೆ ಶೌಚಾಲಯಗಳ ನಿರ್ಮಾಣವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಸಜ್ಜುಗೊಳಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಇಂದು ನಡೆದ ವಿಮರ್ಶಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಿರ್ಮಾಣದ ನಂತರ ನಿರ್ವಹಣೆಯ ಜವಾಬ್ದಾರಿಯನ್ನು ನಿರ್ಮಾಣ ಸಂಸ್ಥೆಗೆ ಒಪ್ಪಿಸಲಾಗುತ್ತಿದ್ದು ಇದು ವಿನೂತನ ಪ್ರಯೋಗವಾಗಿದೆ, ನಿರ್ಮಾಣದ ನಂತರ ನಿರ್ವಹಣೆಯಿಲ್ಲದೆ ಸೊರಗಬಾರದು ಎಂಬ ಉದ್ದೇಶದಿಂದ ಈ ಹೊಸ ಪದ್ಧತಿಯಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗುತ್ತಿದೆ, ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಿ ಶೌಚಾಲಯಗಳ ನಿರ್ಮಾಣವನ್ನು ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದು ಸಚಿವರು ಸೂಚನೆ ನೀಡಿದರು. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ನೀರು ಮತ್ತು ನೈರ್ಮಲ್ಯದ ಬಗ್ಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿರುವುದರಿಂದ ಆದ್ಯತೆಯ ಮೇಲೆ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರವೇಜ್, ಗ್ರಾಮೀಣ ನೀರು ಸರವರಾಜು ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರಪ್ರಸಾದ್ ಹಾಗೂ ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯದ ಕೈದಿಗಳಿಗೆ ಗುಡ್ ನ್ಯೂಸ್: ಸನ್ನಡತೆ ಆಧಾರದಲ್ಲಿ 55 ಮಂದಿ ಬಿಡುಗಡೆಗೆ ಸಂಪುಟದಲ್ಲಿ ತೀರ್ಮಾನ
ಕನ್ನಡದ ಹಬ್ಬವಾದ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ: ದಿನೇಶ್ ಗೂಳಿಗೌಡ