ಬೆಂಗಳೂರು : ಶಾಲಾ ಸಂಘಟನೆಗಳು ಹಾಗೂ ಸರ್ಕಾರದ ನಡುವೆ ಕಾನೂನು ಸಂಘರ್ಷ ನಡೆಯುತ್ತಿದ್ದು,ಇದರ ಮಧ್ಯ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ ಮಂಡಳಿ ಪರೀಕ್ಷೆಗಳು ಆರಂಭವಾಗಲಿವೆ. ಸರ್ಕಾರ ಸಿದ್ದಪಡಿಸಿರುವ ಪ್ರಶ್ನೆ ಪತ್ರಿಕೆಗೆ ಆಯಾ ಶಾಲೆಗಳಲ್ಲೇ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ.
‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಸೇರಿ ಒಟ್ಟು 69,137 ಶಾಲೆಗಳಿಂದ 28.14 ಲಕ್ಷ ವಿದ್ಯಾರ್ಥಿಗಳಿಗೆ ಮಾ.18ರವರೆಗೆ ಮೌಲ್ಯಾಂಕನ ಪರೀಕ್ಷೆಗಳು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದೆ.
ಸಂವಿಧಾನವನ್ನು ಸುಟ್ಟ ಪೆರಿಯಾರ್‌ರನ್ನು ಪೂಜಿಸುವ ಕಾಂಗ್ರೆಸ್‌ಗೆ ಆ ಬಗ್ಗೆ ಮಾತನಾಡುವ ನೈತಿಕತೆಯೇ ಇಲ್ಲ – ಬಿಜೆಪಿ
5ನೇ ತರಗತಿ ಪರೀಕ್ಷೆಗಳು ನಿಗದಿಯಂತೆ ಮಾ.11ರಿಂದ 14ರ ವರೆಗೆ, 8, 9ನೇ ತರಗತಿಗೆ ಮಾ.11- 18ರವರೆಗೆ ಪರೀಕ್ಷೆಗಳು ನಡೆಯಲಿವೆ. ಎಲ್ಲ ಮಕ್ಕಳಿಗೂ ಮಧ್ಯಾಹ್ನ 2.30ಕ್ಕೆ ಪರೀಕ್ಷೆ ಆರಂಭವಾಗಲಿದ್ದು ಕ್ರಮವಾಗಿ 4.30ರವರೆಗೆ, ಸಂಜೆ 5, 5.15ಕ್ಕೆ ಮುಕ್ತಾಯ ವಾಗಲಿವೆ. 5ನೇ ತರಗತಿಗೆ ಪ್ರಥಮ ಭಾಷೆ, ದ್ವಿತೀಯ ಭಾಷೆ, ಗಣಿತ ಮತ್ತು ಪರಿಸರ ಅಧ್ಯಯನ ಸೇರಿ 4 ವಿಷಯಗಳು, 8 ಮತ್ತು 9ನೇ ತರಗತಿಗೆ ಪ್ರಥಮ ಭಾಷೆ, ದ್ವಿತೀಯ ಭಾಷೆ, ತೃತೀಯ ಭಾಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿವೆ.